ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಪತ್ನಿ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಏಪ್ರಿಲ್ 09: ನಿವೃತ್ತ ಐಎಎಸ್ ಅಧಿಕಾರಿ, ಬಿಜೆಪಿ ಮುಖಂಡರೂ ಆಗಿದ್ದ ದಿವಂಗತ ಕೆ.ಶಿವರಾಮ್ ಅವರ ಪತ್ನಿ ವಾಣಿ ಶಿವರಾಮ್ ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷದ ಶಾಲು ಹೊದಿಸುವ ಮೂಲಕ ಕೆ.ಶಿವರಾಂ ಅವರ ಧರ್ಮಪತ್ನಿ ವಾಣಿ ಶಿವರಾಂ, ರೂಪಾ ಲಿಂಗೇಶ್, ಗೋಪಿಕೃಷ್ಣ, ಛಲವಾದಿ ಮಹಾಸಭಾದ ಪದಾಧಿಕಾರಿಗಳ ಸೇರ್ಪಡೆಯಾಗಿದ್ದು, ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷದ ಬಾವುಟವನ್ನ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಈ ಕುರಿತು ಡಿ ಕೆ ಶಿವಕುಮಾರ್ ಮಾತನಾಡಿ, ಬಿಜೆಪಿ ಹಾಗೂ ಬೇರೆ ಪಕ್ಷಕ್ಕೆ ಸೇರುವುದಕ್ಕಿಂತ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಶಕ್ತಿ ತುಂಬಲು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಶಿವರಾಂ ಅವರು ಐಎಎಸ್ ಅಧಿಕಾರಿಯಾಗಿ ಪರಿಚಿತರಾಗಿದ್ದಾರೆ. ಅವರು ಬಿಜೆಪಿ ಸೇರಿ ಸಾಕಷ್ಟು ಹೋರಾಟ ಮಾಡಿಕೊಂಡು ಬಂದಿದ್ದರು. ಅವರು ವಿಧಿವಶರಾಗುವ ಮುನ್ನ ಚಾಮರಾಜನಗರದಿಂದ ನನಗೆ ಕರೆ ಮಾಡಿದ್ದರು. ಈ ಮಧ್ಯೆ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೂ ಚರ್ಚೆ ಮಾಡಿದ್ದರು. ಆದರೆ ಭಗವಂತನ ಆಟ ಅವರು ಇಂದು ನಮ್ಮೊಂದಿಗೆ ಇಲ್ಲ. ಆದರೆ ಅವರ ಕುಟುಂಬಸ್ಥರು ಹಾಗೂ ಅನುಯಾಯಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಛಲವಾದಿ ಮಹಾಸಭಾ ಕೂಡ ಬಹಳ ದೊಡ್ಡ ಸಂಘಟನೆ. ಈ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದೆ.
ಕಾಂಗ್ರೆಸ್ ಪಕ್ಷ ಈ ಸಮಾಜದವರನ್ನು ಗುರುತಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಒಪ್ಪದೆ ಇಂದು ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಹಳಬರು, ಹೊಸಬರು ಎಂಬ ತಾರತಮ್ಯ ಇಲ್ಲದೇ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನೀವೆಲ್ಲರೂ ಇನ್ನು ಮುಂದೆ ಕಾಂಗ್ರೆಸ್ ಪಕ್ಷದ ಸಕ್ರಿಯ ನಾಯಕರು. ನೀವುಗಳು ನಿಮ್ಮ ಬ್ಲಾಕ್ ಮಟ್ಟದಲ್ಲಿ ಹೆಚ್ಚಿನ ಜನರನ್ನು ಆನ್ ಲೈನ್ ಮೂಲಕ ಕಾಂಗ್ರೆಸ್ ಪಕ್ಷದ ಸದಸ್ಯರನ್ನಾಗಿ ಮಾಡಬೇಕು. ತಳಮಟ್ಟದಲ್ಲಿ ಸಂಘಟನೆ ಮಾಡಿ ಪಕ್ಷಕ್ಕೆ ಶಕ್ತಿ ತುಂಬಬೇಕು. ಪಕ್ಷಕ್ಕೆ ಸೇರುವುದಷ್ಟೇ ಮುಖ್ಯವಲ್ಲ. ಪ್ರತಿ ಹಳ್ಳಿಗಳಲ್ಲಿ ಸಂಘಟನೆ ಮಾಡಿ ಪಕ್ಷಕ್ಕೆ ಆಸ್ತಿಯಾಗಬೇಕು.

ನಾನು ಎರಡು ದಿನ ಕೇರಳ ಪ್ರವಾಸ ಮಾಡಿ ಬಂದಿದ್ದು, ಇದೇ ಏ.16 ರಂದು ಮತ್ತೆ ಕೇರಳ ಪ್ರವಾಸ ಮಾಡಲಿದ್ದೇನೆ. ನಂತರ ನಮ್ಮ ರಾಜ್ಯದ ಚುನಾವಣೆ ಮುಗಿದ ನಂತರ ತೆಲಂಗಾಣ ಮತ್ತು ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದೇನೆ. ಮುಖ್ಯಮಂತ್ರಿಗಳ ಜತೆಯಲ್ಲಿ ಉತ್ತರ ಪ್ರದೇಶಕ್ಕೆ ತೆರಳಬೇಕು ಎಂದು ಪಕ್ಷ ತೀರ್ಮಾನಿಸಿದೆ.
ಇಂದು ಬೆಳಗ್ಗೆ ಕೇರಳದಲ್ಲಿ ಪ್ರಚಾರ ಮಾಡಿ ಬಂದಿದ್ದೇನೆ. ಕಳೆದ ಬಾರಿ ಯುಡಿಎಫ್ ಕೇರಳದಲ್ಲಿ 19 ಕ್ಷೇತ್ರಗಳನ್ನು ಗೆದ್ದಿತ್ತು. ಈ ಬಾರಿ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ. ಮುಖ್ಯಮಂತ್ರಿಗಳು ಕೂಡ ಬಿಜೆಪಿಗೆ ಕೇರಳದಲ್ಲಿ ಒಂದು ಸ್ಥಾನ ಗೆಲ್ಲಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್ ಪಿ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಯಾವುದೇ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳ ಬಗ್ಗೆ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.
ಈ ಮಧ್ಯೆ ಚುನಾವಣಾ ಆಯೋಗದಿಂದ ಕರ್ನಾಟಕಕ್ಕೆ ಬರ ಪರಿಹಾರ ವಿಳಂಬವಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಪ್ಪಿಕೊಂಡಿದ್ದಾರೆ. ಆದರೆ ನಮ್ಮ ರಾಜ್ಯ ಸರ್ಕಾರ ನಾಲ್ಕೈದು ತಿಂಗಳ ಹಿಂದೆಯೇ ಬರ ಪರಿಹಾರ ನೀಡುವಂತೆ ಮನವಿ ಮಾಡಿತ್ತು. ಪ್ರಧಾನಮಂತ್ರಿ, ಗೃಹ ಸಚಿವರನ್ನು ಮುಖ್ಯಮಂತ್ರಿಗಳು ಭೇಟಿ ಮಾಡಿ ಮನವಿ ಮಾಡಿದ್ದರು. ಕೇಂದ್ರದಿಂದ ಬರ ಅಧ್ಯಯನ ತಂಡ ಕೂಡ ಬಂದಿತ್ತು, ಅದನ್ನು ಅವರು ಮರೆತಿದ್ದಾರೆ.
ಇನ್ನು ಬರ ಪರಿಹಾರ ವಿಚಾರವಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಬರ ಪರಿಹಾರ ವಿತರಣೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ನಮ್ಮ ಪಕ್ಷದ ವತಿಯಿಂದ ಕೂಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದು, ನಮ್ಮ ರಾಜ್ಯಕ್ಕೆ ಬರಬೇಕಾದ ಅನುದಾನ, ಪರಿಹಾರ ಬಾಕಿಯಿದೆ ಎಂದು ತಿಳಿಸಿದ್ದೇವೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications