ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರದಿಂದ ಶಂಭು ಕಲ್ಲೋಳ್ಳರ್ ಸಿಗುತ್ತಾ ಕಾಂಗ್ರೆಸ್​ ಟಿಕೆಟ್​?

ಬೆಳಗಾವಿ,ಏಪ್ರಿಲ್‌ 1: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ರಂಗೇರಿದೆ. ಇತ್ತ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮೂರು ಪಕ್ಷಗಳು ಸಹ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಗೆಲ್ಲುವ ವಿಶ್ವಾಸವನ್ನ ವ್ಯಪ್ತಪಡಿಸಿವೆ.

ಇನ್ನೂ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ 2023ರ ದಿನಾಂಕವನ್ನು ಪ್ರಕಟಿಸಿದೆ. ಕರ್ನಾಟಕದಲ್ಲಿ ಮೇ 10, ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Former IAS officer Shambhu Kallolikar seeks to contest assembly election

ಈಗಾಗಲೇ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಾಕಷ್ಟು ಐಎಎಸ್‌ ಹಾಗೂ ಐಪಿ ಎಸ್‌ ಅಧಿಕಾರಿಗಳು ರಾಜಕೀಯಕ್ಕೆ ಎಂಟ್ರಿಯಾಗುತ್ತಿದ್ದಾರೆ. ಕರ್ನಾಟಕದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆಯಲ್ಲಿರುವ ಬೆಳಗಾವಿಯ ರಾಯಬಾಗದದಿಂದ ಸ್ಪರ್ಧಿಸುವುದಾಗಿ ತಮಿಳುನಾಡು ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ್ ಘೋಷಿಸಿದ್ದಾರೆ.

ಸೇವೆಯಿಂದ ಸ್ವಯಂ ನಿವೃತ್ತಿ (ವಿಆರ್‌ಎಸ್) ಘೋಷಿಸಿರುವ ಅವರು 1991-ಬ್ಯಾಚ್ ಐಎಎಸ್ ಅಧಿಕಾರಿ ಕಳೆದ ಬಾರಿ ತಮಿಳುನಾಡಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Former IAS officer Shambhu Kallolikar seeks to contest assembly election

ಇತ್ತೀಚೆಗೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇವರು ಆಮ್ ಆದ್ಮ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದೀಗ ಕರ್ನಾಟಕ ಚುನಾವಣಾ ಅಖಾಡಕ್ಕೆ ಮತ್ತೊಬ್ಬ IAS ಅಧಿಕಾರಿ ಧುಮುಕಿದ್ದಾರೆ. ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರದಿಂದ ಶಂಭು ಕಲ್ಲೋಳ್ಳರ್ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ.

ಶಂಭು ಕಲ್ಲೋಳ್ಳ‌ ತಮಿಳುನಾಡು ಕೇಡರ್‌ನ 1994ರ ಬ್ಯಾಚಿನ IAS ಅಧಿಕಾರಿಯಾಗಿದ್ದು, ಚುನಾವಣೆ ಸ್ಪರ್ಧೆ ಹಿನ್ನೆಲೆಯಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಯಬರಟ್ಟಿ ಗ್ರಾಮದವರಾಗಿರುವ ಶಂಭು ಕಲ್ಲೋಳರ್ ಕಳೆದ ಎರಡು ವರ್ಷಗಳ ಹಿಂದೆ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಸಾಮಾಜಿಕ ಕೆಲಸ ತೊಡಗಿಸಿಕೊಂಡಿದದು, ಇದೀಗ ಚುನಾವಣಾ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ.

Former IAS officer Shambhu Kallolikar seeks to contest assembly election

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕಲ್ಲೋಲ್ಕರ್ ಅವರು ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತ ರಾಯಬಾಗದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು ಈ ಬಾರೀ ಶಂಭು ಕಲ್ಲೋಳಿಕರ್ ಅವರು ಕಾಂಗ್ರೆಸ್‌ ಟಿಕೆಟ್‌ ತಮಗೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಇನ್ನೂ ಕಾಂಗ್ರೆಸ್‌ ಹೈಕಮಾಂಡ್‌ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಶಂಭು ಕಲ್ಲೋಳಿಕರ್ ಈಗಾಗಲೇ ಟಿಕೆಟ್ ಗಾಗಿ ಕೈ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಜೊತೆಗೆ ಈಗಾಗಲೇ ಒಂದು ಸುತ್ತಿ ಮಾತುಕತೆ ನಡೆಸುತ್ತಿದ್ದು, ಕಾಂಗ್ರೆಸ್‌ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕಲ್ಲೋಳಿಕರ್ ಈಗಾಗಲೇ ರಾಯಬಾಗದಲ್ಲಿ ರಾಜಕೀಯ ನೆಲೆ ಹೊಂದಿದ್ದು, ಇವರ ಸೋದರ ಸಂಬಂಧಿ ಶಾಂತಾ ಕಲ್ಲೋಳಿಕರ್ ಅವರು 2012ರಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+