ರಾಜ್ಯಪಾಲ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಲಂಚ: ಹೈಕೋರ್ಟ್ ಬೇಸರ

ಬೆಂಗಳೂರು, ಏಪ್ರಿಲ್ 30: ರಾಜ್ಯಪಾಲ ಹುದ್ದೆ ಪಡೆಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರು ಲಂಚ ನೀಡಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

ನಿವೃತ್ತ ನ್ಯಾಯಮೂರ್ತಿಯೊಬ್ಬರು ವಂಚಕ ಯುವರಾಜ್‌ ಸ್ವಾಮಿಗೆ ಲಂಚ ನೀಡಿದ್ದಾರೆಂಬ ವಿಷಯವು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದೆ.

ಉದ್ಯಮಿ ಸುರೇಂದ್ರ ರೆಡ್ಡಿ ಎಂಬುವವರಿಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವ ಆಮಿಷವೊಡ್ಡಿಒಂದು ಕೋಟಿ ರೂ. ಪಡೆದು ವಂಚನೆ ಎಸಗಿದ ಪ್ರಕರಣ ಸೇರಿ ಒಟ್ಟು ಆರು ವಂಚನೆ ಪ್ರಕರಣಗಳಲ್ಲಿ ಆರೋಪಿ ಯುವರಾಜ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ವೇಳೆ ನ್ಯಾ.ಕೆ. ನಟರಾಜನ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Former judge Bribe For Governor Post Unfortunate, Says Karnataka High Court

ಆರೋಪಿಯ ವಿರುದ್ಧ ಉದ್ಯಮಿಗಳು, ರಾಜಕಾರಣಿಗಳು ನ್ಯಾಯಮೂರ್ತಿಗಳು ಸೇರಿ ಅನೇಕರಿಂದ ಕೋಟ್ಯಂತರ ಹಣ ಪಡೆದು ವಂಚಿಸಿರುವ ಆರೋಪವಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ರಾಜ್ಯಪಾಲ ಹುದ್ದೆಯ ಆಸೆ ತೋರಿಸಿ 8.5 ಕೋಟಿ ರೂ. ಲಂಚ ಪಡೆದಿದ್ದಾನೆ.

ನಿವೃತ್ತ ನ್ಯಾಯಮೂರ್ತಿಯೊಬ್ಬರು ಲಂಚ ನೀಡಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ, ಇದು ನ್ಯಾಯಮೂರ್ತಿಗಳ ಘನತೆ ಜತೆಗೆ ರಾಜ್ಯಪಾಲರ ಹುದ್ದೆಯ ವರ್ಚಸ್ಸನ್ನೂ ಕುಗ್ಗಿಸಲಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಅಭಿಪ್ರಾಯ ತಿಳಿಸಿದೆ.

Recommended Video

      #Positive Story: ಮೇ ತಿಂಗಳಿನಲ್ಲಿ ಆಕ್ಸಿಜನ್ ಉತ್ಪಾದನೆ ಶೇ. 25 ರಷ್ಟು ಹೆಚ್ಚಳ | Oneindia Kannada

      ಅಲ್ಲದೆ, ನಿವೃತ್ತ ನ್ಯಾಯಮೂರ್ತಿಗಳಿಗೆ ವಂಚಿಸಿದ ಆರೋಪ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಯುವರಾಜ್ ಸ್ವಾಮಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿ ಆದೇಶಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+