ಕೋಟಿ ಒಡೆಯ ಬಸವರಾಜ ಬೊಮ್ಮಯಿ ಹೆಸರಲ್ಲಿ ಒಂದೇ ಒಂದು ಕಾರಿಲ್ಲ: ಒಟ್ಟು ಆಸ್ತಿ ಎಷ್ಟು ಗೊತ್ತಾ?
ಹಾವೇರಿ, ಏಪ್ರಿಲ್ 16: ಕರ್ನಾಟಕ ಲೋಕಸಭಾ ಚುನಾವಣೆ ರಂಗೇರಿದ್ದು, ಸೋಮವಾರ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಬಸವರಾಜ ಬೊಮ್ಮಾಯಿ 54 ಕೋಟಿ ಮೌಲ್ಯದ ಆಸ್ತಿ ಘೋಷಣೆ ಮಾಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಯಾಗಿದ್ದರು ಅವರ ಬಳಿ ಸ್ವಂತ ವಾಹನವಿಲ್ಲಅಂತ ಘೋಷಣೆ ಮಾಡಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಮ್ಮ ಬಳಿ 29.58 ಕೋಟಿ ರೂಪಾಯಿ ಆಸ್ತಿ ಇದೆ ಎಂದು ಮಾಹಿತಿ ನೀಡಿದ್ದಾರೆ. ಇದರ ಜತೆಗೆ 20 ಕೋಟಿ ರು. ಮೌಲ್ಯದ ಪಿತ್ರಾರ್ಜಿತ ಆಸ್ತಿಯೂ ತಮಗೆ ಬಂದಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೋಮವಾರ ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡೆವಿಟ್ನಲ್ಲಿ ಆಸ್ತಿ ವಿವರವನ್ನ ಬಸವರಾಜ ಬೊಮ್ಮಾಯಿ ಘೋಷಿಸಿಕೊಂಡಿದ್ದಾರೆ. ಬೊಮ್ಮಾಯಿ ಬಳಿ 3 ಲಕ್ಷ ರು. ನಗದು, ಬ್ಯಾಂಕ್ ಹಾಗೂ ಫೈನಾನ್ಸ್ಗಳಲ್ಲಿ 51 ಲಕ್ಷ ರು. ಠೇವಣಿ, ಬಾಂಡ್, ವಿವಿಧ ಕಂಪನಿ ಶೇರುಗಳಲ್ಲಿ 3.30 ಕೋಟಿ ರು. ಹೂಡಿಕೆ ಕುರಿತು ಮಾಹಿತಿ ನೀಡಿದ್ದಾರೆ.
1.59 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹೊಂದಿರುವ ಬೊಮ್ಮಾಯಿ ಅವರ ಬಳಿ ಯಾವುದೇ ಸ್ವಂತ ವಾಹನ ಇಲ್ಲ. 6.12 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 96.8 ಲಕ್ಷ ಮೌಲ್ಯದ ಕೃಷಿ ಜಮೀನು, 7 ಕೋಟಿ ಮೌಲ್ಯದ ಕೃಷಿಯೇತರ ಜಮೀನನ್ನ ಹೊಂದಿದ್ದಾರೆ. 6.3 ಕೋಟಿ ರೂ. ಮೌಲ್ಯದ ವಾಣಿಜ್ಯ ಕಟ್ಟಡ ಹೊಂದಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರು ಹಾಗೂ ಶಿಗ್ಗಾಂವಿಯಲ್ಲಿ 9.18 ಕೋಟಿ ರೂ. ಮೌಲ್ಯದ ಮನೆ ಸೇರಿ 23.45 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ.
5.31 ಕೋಟಿ ಸಾಲ ಹೊಂದಿರುವುದಾಗಿ ಅಫಿಡವಿಟ್ನಲ್ಲಿ ಬೊಮ್ಮಾಯಿ ಉಲ್ಲೇಖಿಸಿದ್ದು, 20 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಹೊಂದಿರುವ ಬೊಮ್ಮಾಯಿ, ಪತ್ನಿ ಬಳಿ 1.32 ಕೋಟಿ ಮೌಲ್ಯದ ಚರಾಸ್ತಿ, ಪುತ್ರಿ ಬಳಿ 1.53 ಕೋಟಿ ಚರಾಸ್ತಿ ಇದೆ ಎಂದು ತಿಳಿಸಿದ್ದಾರೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ












Click it and Unblock the Notifications