ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಹಿರಿಯ ಶಾಸಕ ಸಿ.ಎಂ.ಉದಾಸಿ ನಿಧನ

|
Google Oneindia Kannada News

ಬೆಂಗಳೂರು, ಜೂನ್ 08: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ (85) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

Recommended Video

ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಬಿಜೆಪಿ ಶಾಸಕ ಸಿಎಂ ಉದಾಸಿ | Oneindia Kannada

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ನಿಧನರಾಗಿರುವುದಾಗಿ ತಿಳಿದುಬಂದಿದೆ.

Former Minister C M Udasi Passes Away

ಈಚೆಗಷ್ಟೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಅವರ ಪುತ್ರ ಮೇ 29ರಂದು ಮಾಹಿತಿ ನೀಡಿದ್ದರು.

ಬುಧವಾರ ಹಾನಗಲ್ ಗೆ ಮೃತದೇಹ ಕೊಂಡೊಯ್ದು ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರ ಸಂಸದ ಶಿವಕುಮಾರ್ ಉದಾಸಿ ಹೇಳಿಕೆ ನೀಡಿದ್ದಾರೆ.

1983ರಲ್ಲಿ ಮೊದಲ ಬಾರಿ ವಿಧಾನ ಸಭೆಗೆ ಪಕ್ಷೇತರರಾಗಿ ಪ್ರವೇಶ ಪಡೆದಿದ್ದ ಉದಾಸಿ ಅವರು 1985ರಲ್ಲಿ ಜನತಾ ಪಕ್ಷದಿಂದ ಗೆಲುವು ಪಡೆದಿದ್ದರು. 1994ರಲ್ಲಿ ಜನತಾ ದಳದಿಂದ ಆಯ್ಕೆಯಾಗಿದ್ದರು. ಆನಂತರ ಬಿಜೆಪಿ ಸೇರಿದ್ದ ಅವರು 2004, 2008 ಮತ್ತು 2018ರಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದರು.

ಉದಾಸಿ ನಿಧನಕ್ಕೆ ಮುಖ್ಯ ಮಂತ್ರಿಗಳ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ.

ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

English summary
Senior Leader of BJP and the former PWD minister of Karnataka CM Udasi Passes Away due to health problems
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X