CT Ravi Case: ಸಿಟಿ ರವಿ ಬಂಧನ ವಿಚಾರದಲ್ಲಿ ಸ್ಫೋಟಕ ತಿರುವು? ಸಿಐಡಿ ಎಂಟ್ರಿ ಬಗ್ಗೆ...
ಸಿಟಿ ರವಿ ಕೇಸ್ ಕರ್ನಾಟಕದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಒಂದು ಕಡೆ ನನಗೆ ಈ ವಿಚಾರದಲ್ಲಿ ನ್ಯಾಯ ಸಿಗಬೇಕು ಅಂತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಆಗ್ರಹಿಸಿದ್ರೆ. ಇನ್ನೊಂದು ಕಡೆ ಸಿಟಿ ರವಿ ಅವರು ನನಗೇ ಅನ್ಯಾಯ ಆಗಿದೆ ಅಂತಾ ಆರೋಪ ಮಾಡ್ತಿದ್ದಾರೆ. ಹೀಗೆ ಈ ಪ್ರಕರಣ ಸಿದ್ದರಾಮಯ್ಯ ಅವರ ಸರ್ಕಾರಕ್ಕೂ ದೊಡ್ಡ ಸವಾಲು ತಂದೊಡ್ಡಿದ್ದು, ಭಾರಿ ಗಮನ ಸೆಳೆದಿದೆ. ಇಂತಹ ಸಮಯದಲ್ಲೇ, ಸಿಟಿ ರವಿ ಬಂಧನ ವಿಚಾರದಲ್ಲಿ ಸ್ಫೋಟಕ ತಿರುವು? ಸಿಐಡಿ ಎಂಟ್ರಿ ಬಗ್ಗೆ...
ಹೌದು, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಸಿಟಿ ರವಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವು ಬೆಳಗಾವಿಯ ಚಳಿಗಾಲದ ಅಧಿವೇಶನ ಅಲ್ಲಾಡಿ ಹೋಗುವಂತೆ ಮಾಡಿತ್ತು. ಇಡೀ ಬೆಳಗಾವಿ ಮಾತ್ರವಲ್ಲ ಇಂಡಿಯಾದಲ್ಲೇ ಈ ಘಟನೆಯಿಂದ ಸಂಚಲನ ಸೃಷ್ಟಿ ಆಗಿತ್ತು. ಹಾಗೇ ಈ ಘಟನೆಯನ್ನ ಕರ್ನಾಟಕ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ, ಸಿಟಿ ರವಿ ಬಂಧನ ಪ್ರಕರಣದಲ್ಲಿ ಸಿಐಡಿ ಎಂಟ್ರಿ? ಮುಂದೆ ಓದಿ.

ಸಿಟಿ ರವಿ ಸಿಐಡಿ ಬಲೆಯಲ್ಲಿ?
ಅಂದಹಾಗೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾಜಿ ಸಚಿವ ಸಿಟಿ ರವಿ ಅಶ್ಲೀಲ ಪದವನ್ನು ಬಳಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣ ಸಿಐಡಿಗೆ ವರ್ಗಾವಣೆ ಮಾಡುವ ವಿಚಾರವಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ಈ ಮೂಲಕ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ಭಾರಿ ಗಮನ ಸೆಳೆದಿದೆ. ಸಿದ್ದರಾಮಯ್ಯ ಅವರ ಸರ್ಕಾರ ಯಾವ ಕ್ರಮ ಕೈಗೊಳ್ಳಬಹುದು? ಎಂಬ ಕುತೂಹಲ ಕೆರಳಿದೆ.
7 ಪುಟದ ಪತ್ರ ಬರೆದಿದ್ದಾರೆ....
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಟಿ ರವಿ ಅವರು ಕೂಡ 7 ಪುಟದ ಪತ್ರ ಬರೆದಿದ್ದಾರೆ. ಧರಣಿ ಮಾಡುವಾಗ ನಮ್ಮನ್ನು ಕರ್ಕೊಂಡು ಹೋಗಿ ರಾತ್ರಿ ಪೂರ್ತಿ ಸುತ್ತಾಡಿಸಿದ್ದು, ಹೀಗೆಲ್ಲಾ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತಾ ಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದರು. ಹಾಗೇ ಈ ಸಮಯದಲ್ಲೇ ಸಿಐಡಿ ತನಿಖೆ ವಿಚಾರವಾಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದ್ದು, ಈ ಪ್ರಕರಣ ಮುಂದೆ ಏನಾಗುತ್ತೆ? ಅನ್ನೋದನ್ನ ಈಗ ಕಾದು ನೋಡಬೇಕಿದೆ.
ಒಟ್ನಲ್ಲಿ ಸಿಟಿ ರವಿ & ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ನಡೆಯುತ್ತಿರುವ ಈ ಯುದ್ಧವು, ಇದೀಗ ರೋಚಕ ಘಟ್ಟ ತಲುಪುವ ನಿರೀಕ್ಷೆ ಇದೆ. ಮತ್ತೊಂದು ಕಡೆ ಬಿಜೆಪಿ ನಾಯಕರು ಈ ವಿಚಾರವನ್ನೇ ಮುಂದೆ ಇಟ್ಟುಕೊಂಡು ದೊಡ್ಡ ಹೋರಾಟಕ್ಕೂ ಸಜ್ಜಾಗುತ್ತಿದ್ದು, ಸಿಟಿ ರವಿ ಕೂಡ ಇದೇ ಘಟನೆಯನ್ನ ಆಧಾರವಾಗಿಟ್ಟು ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧವೇ ಹರಿಹಾಯುತ್ತಿದ್ದಾರೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications