ಸಾಗರ ಕ್ಷೇತ್ರಕ್ಕೆ ನೀವೇ ಅಭ್ಯರ್ಥಿ ಎಂದ ಬಿಎಸ್ ವೈ ಮಾತಿಗೆ ಹಾಲಪ್ಪ ಸಂತಸ
ಶಿವಮೊಗ್ಗ, ಫೆಬ್ರವರಿ 26 : ಸಾಗರ ಕ್ಷೇತ್ರಕ್ಕೆ ನನ್ನನ್ನು ಮತ್ತು ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಆಗಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ನನಗೆ ಖುಷಿ ತಂದಿದೆ ಎಂದು ಮಾಜಿ ಸಚಿವ ಹರತಾಳ್ ಹಾಲಪ್ಪ ಹೇಳಿದರು.
ಆನಂದಪುರದ ಮುರುಘಾ ಮಠಕ್ಕೆ ತೆರಳಿ ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಸಾಗರ ಕ್ಷೇತ್ರಕ್ಕೆ ನನ್ನನ್ನು ಮತ್ತು ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಆಗಲಿದ್ದಾರೆ ಎಂದು ಹೇಳಿರುವ ಅವರ ಮಾತುಗಳು ಸಂತಸ ತಂದಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ನಾನು ಪ್ರಾಮಾಣಿಕ ಪ್ರಯತ್ನವನ್ನು ಸಲ್ಲಿಸುತ್ತೇನೆ ಬಿಎಸ್ ಯಡಿಯೂರಪ್ಪನವರಿಗೆ ಮಂಗಳವಾರ ಹುಟ್ಟುಹಬ್ಬವಿದ್ದು ಮಂಗಳವಾರ ದಾವಣಗೆರೆಯಲ್ಲಿ ಆಚರಿಸಲಾಗುತ್ತಿದೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಜನಪರ ಯೋಜನೆಗಳನ್ನು ರೈತರಿಗಾಗಿ ಜಾರಿಗೆ ತಂದಿದ್ದರು. ಯೋಜನೆಗಳ ಕುರಿತಾಗಿ ದಾವಣಗೆರೆಯಲ್ಲಿ ರೈತ ಸಮಾವೇಶವನ್ನಾಗಿ ಮಾಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ನಮ್ಮ ಸಾಗರ ಕ್ಷೇತ್ರ ಹೊಸನಗರದಿಂದ ಅತಿ ಹೆಚ್ಚು ಕಾರ್ಯಕರ್ತರು ಅಲ್ಲಿಗೆ ತೆರಳಿದ್ದಾರೆ ಯಡಿಯೂರಪ್ಪನವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲು ನಾವು ಯಾವುದೇ ತ್ಯಾಗಕ್ಕೂ ಸಿದ್ಧವಿದ್ದೇವೆ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಜಯವನ್ನು ಗಳಿಸಲಿದೆ ಎಂದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಯಾವುದೇ ಬಣಗಳು ಇಲ್ಲ ಎಲ್ಲರೂ ಬಿಜೆಪಿ ಎಂದು ಕೆಲಸವನ್ನು ಮಾಡಲಿದ್ದೇವೆ ಎಂದರು ಈಗಾಗಲೇ ಬೂತ್ ಮಟ್ಟದಲ್ಲಿ ಪ್ರವಾಸ ಕೈಗೊಂಡಿದ್ದು ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.
ಈ ಹಿಂದೆ ನಾನು ಹೊಸ ನಗರ ಕ್ಷೇತ್ರದಲ್ಲಿ ಶಾಸಕನಾಗಿದ್ದು ಸಾಗರ ಕ್ಷೇತ್ರದಲ್ಲಿ ಚುನಾವಣೆ ಮಾಡಲು ನನಗೇನು ಹೊಸದಲ್ಲ ನಮಗೆ ಸೊರಬ ಮತ್ತು ತೀರ್ಥಹಳ್ಳಿ ಎರಡು ಕ್ಷೇತ್ರಗಳು ಬಿಜೆಪಿ ಗೆಲ್ಲಬೇಕು ಈ ಹಿನ್ನೆಯಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ಸಮಯದಲ್ಲಿ ಆನಂದಪುರ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶಾಂತಕುಮಾರ ಜಿಲ್ಲಾ ಬಿಜೆಪಿ ಸೋಷಿಯಲ್ ಮೀಡಿಯಾ ಸಹ ಸಂಚಾಲಕ ಹೆಚ್ ಆರ್ .ತೀರ್ಥೇಶ್ .ಬಿಜೆಪಿ ಮುಖಂಡರಾದ ಹೂವಪ್ಪ ಮತ್ತು ಮೆಣಸೆ ಆನಂದ .ಹಾಲಪ್ಪ ಅವರು ಉಪಸ್ಥಿತರಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications