ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ವಿಧಿವಶ

|
Google Oneindia Kannada News

ಬೆಂಗಳೂರು, ಜೂನ್ 07; ವಿಧಾನ ಪರಿಷತ್‌ನ ಮಾಜಿ ಸದಸ್ಯ, ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ ವಿಧಿವಶರಾಗಿದ್ದಾರೆ. 2008ರಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಅವರು ಬಳಿಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು.

Recommended Video

ಮಾಜಿ ಸಚಿವ ಮುಮ್ತಾಜ್ ಅಲಿಖಾನ್ ಇನ್ನಿಲ್ಲ | Mumtaz Ali Khan | Oneindia Kannada

ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮುಮ್ತಾಜ್ ಅಲಿ ಖಾನ್ (94) ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ. 2008ರಲ್ಲಿ ಯಡಿಯಾರಪ್ಪ ಸಂಪುಟದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಕಾಂಗ್ರೆಸ್‌ ತೊರೆದ ಮುಮ್ತಾಜ್ ಅಲಿಖಾನ್ಕಾಂಗ್ರೆಸ್‌ ತೊರೆದ ಮುಮ್ತಾಜ್ ಅಲಿಖಾನ್

ಬಿಜೆಪಿಯಿಂದ ಮುಮ್ತಾಜ್ ಅಲಿಖಾನ್ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಜ್ , ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದರು.

ಬಿಜೆಪಿ ಮುಸ್ಲಿಂ ವಿರೋಧಿಯಲ್ಲ: ಮುಮ್ತಾಜ್ ಆಲಿ ಖಾನ್ಬಿಜೆಪಿ ಮುಸ್ಲಿಂ ವಿರೋಧಿಯಲ್ಲ: ಮುಮ್ತಾಜ್ ಆಲಿ ಖಾನ್

Former Minister Mumtaz Ali Khan No More

ಕಾಂಗ್ರೆಸ್ ಸೇರಿದ್ದರು; ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಮುಮ್ತಾಜ್ ಅಲಿ ಖಾನ್ ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. "ಬಿಜೆಪಿಯಲ್ಲಿ ನನಗೆ ಅನ್ಯಾಯವಾಗಿದೆ. ಅದರಲ್ಲೂ ಕೆ. ಎಸ್. ಈಶ್ವರಪ್ಪ ಅವರಿಂದ ನನಗೆ ಬಹಳ ಅನ್ಯಾಯವಾಗಿದೆ. ಆದ್ದರಿಂದ ಪಕ್ಷ ಬಿಡುತ್ತಿದ್ದೇನೆ' ಎಂದು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಕಾಂಗ್ರೆಸ್ ಸೇರಿದ್ದರು.

2015ರಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. "ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆಯುತ್ತಿಲ್ಲ, ಅಲ್ಪ ಸಂಖ್ಯಾತ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡುತ್ತಿಲ್ಲ" ಎಂದು ಆರೋಪಿಸಿದ್ದರು.

28/5/1927ರಂದು ಜನಿಸಿದ್ದ ಮುಮ್ತಾಲ್ ಅಲಿಖಾನ್, ಎಂ.ಎ, ಬಿ. ಎಲ್. ಪಿ. ಹೆಚ್.ಡಿ. ಪದವಿ ಪಡೆದಿದ್ದರು. ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ದಸರಾ ಪ್ರಶಸ್ತಿ-ಸಮಾಜ ಸೇವೆ-ಕರ್ನಾಟಕ ಸರ್ಕಾರ (1992), ಭಾರತ ರತ್ನ ಡಾ. ಬಿ. ಆರ್‍. ಅಂಬೇಡ್ಕರ್ ಪ್ರಶಸ್ತಿ (2002), ಶ್ರೀ ಜಿ. ನಾರಾಯಣ ಕುಮಾರ್‌ ಸಂಸ್ಥೆಯಿಂದ ಸಮಾಜ ಸೇವೆಗಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (1993) ಸೇರಿದಂತೆ ವಿವಿಧ ಪ್ರಶಸ್ತಿ ಪಡೆದಿದ್ದರು.

English summary
Former minister Mumtaz Ali Khan no more. He served as minister in the B. S. Yediyurappa cabinet in 2008. Later he quit BJP and joined Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X