ಇನ್ನೇನಿದ್ದರೂ ಆಪರೇಷನ್‌ ಕಮಲ ಖಚಿತ: ಮುರುಗೇಶ್‌ ನಿರಾಣಿ

ಬೆಂಗಳೂರು, ಅಕ್ಟೋಬರ್‌ 25: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಇದೀಗ ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ಕೊಡಲು ಬಿಜೆಪಿ ಮುಂದಾಗಿದೆ.

ಹೌದು, ಈ ಕುರಿತು ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾತನಾಡಿ, ಆಪರೇಷನ್‌ ಹಸ್ತ ಎಂದು ಕೆಲ ಕಾಂಗ್ರೆಸ್‌ ನಾಯಕರು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದ್ದು, ಇನ್ನೇನಿದ್ದರೂ ಆಪರೇಷನ್‌ ಕಮಲ ಖಚಿತ ಎಂದು ಆಪರೇಚನ್‌ ಕಮಲದ ಕುರಿತು ಸೂಚನೆ ನೀಡಿದ್ದಾರೆ.

former-minister-murugesh-nirani

ಇನ್ನೂ 2024 ರ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಕಾಂಗ್ರೆಸ್‌ ನಲ್ಲಿ ಈಗಾಗಲೇ ಅಸಮಾಧಾನ ಸ್ಟೋಟಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷ ಇರಲೆಂಬುದು ನಮ್ಮ ಆಶಯ. ಆದರೆ, ಬಿಟ್ಟಿ ಭಾಗ್ಯಗಳನ್ನು ನೀಡಿ ತಮ್ಮ ತಮ್ಮೊಳಗೆ ಕಚ್ಚಾಡುತ್ತಿರುವ ಕಾಂಗ್ರೆಸ್‌ ಮುಖಂಡರಿಂದಲೇ ಸರ್ಕಾರ ನೆಲಕಚ್ಚುವ ಸಮಯ ದೂರವಿಲ್ಲ ಎಂದು ಸರ್ಕಾರ ಪತನಗೊಳಲಿದೆ ಎಂದು ಹೇಳಿದ್ದಾರೆ.

ಇನ್ನೂ ರಾಜ್ಯ ಸರ್ಕಾರದ ಗ್ಯಾರಂಟಿ ಘೋಷಣೆಯ ವಿರುದ್ದ ವಾಗ್ದಾಳಿ ನಡೆಸಿದ ಅವರು, ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಸಹ ಸಾಕಷ್ಟುಗೊಂದಲ ಸೃಷ್ಟಿಸಿದೆ. ಹಣವನ್ನು ಗ್ಯಾರಂಟಿಗೆ ಕ್ರೋಢೀಕರಿಸುವ ಭರದಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹಾಕಿದೆ. ಅಬಕಾರಿ ಶುಲ್ಕ, ವಿದ್ಯುತ್‌ ಬಿಲ್‌ ಏರಿಕೆ ಸೇರಿದಂತೆ ಇತರೆ ರೀತಿಯಲ್ಲಿ ತೆರಿಗೆ ಹಾಕಿ ಒಂದು ರೀತಿಯಲ್ಲಿ ಎಡಗೈಯಿಂದ ಕಸಿದುಕೊಂಡು ಬಲಗೈಗೆ ಕೊಡುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+