ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ ಸಚಿವ, ಮಾಜಿ ಶಾಸಕರು!
ಬೆಂಗಳೂರು, ಮೇ 7: ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು, ಮಾಜಿ ಸಚಿವರು, ಶಾಸಕರು ಇಂದು ಬಿಜೆಪಿ ಸೇರ್ಪಡೆಯಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೋಲಾರದ ಮಾಜಿ ಶಾಸಕ ವರ್ತೂರು ಪ್ರಕಾಶ್, ಮಾಲೂರಿನ ಮಾಜಿ ಶಾಸಕ ಮಂಜುನಾಥ ಗೌಡ, ರಾಜ್ಯಸಭೆಯ ಮಾಜಿ ಸದಸ್ಯ ಕೆ ವಿ ಕೃಷ್ಣಮೂರ್ತಿ, ಮೈಸೂರಿನ ಮಾಜಿ ಶಾಸಕ ಸಂದೇಶ ನಾಗರಾಜ, ಮಂಡ್ಯದ ನಿವೃತ್ತ ಐಆರ್ ಎಸ್ ಅಧಿಕಾರಿ ಡಾ. ಲಕ್ಷ್ಮೀ, ಅಶೋಕ ಜಯರಾಮ ಬಿಜೆಪಿ ಸೇರ್ಪಡೆಯಾದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷದ ಬಾವುಟ ಹಿಡಿದು ಬಿಜೆಪಿ ಸೇರಿದರು. ಇದೇ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ಎಸ್.ಟಿ ಸೋಮಶೇಖರ್, ಮುನಿರತ್ನ, ನಾರಾಯಣಗೌಡ, ಡಾ. ಕೆ ಸುಧಾಕರ್,
ಕೆ. ಗೋಪಾಲಯ್ಯ, ಸಂಸದ ಮುನಿಸ್ವಾಮಿ, ಮಾಜಿ ಸಚಿವ ಸಿ ಪಿ ಯೋಗೀಶ್ವರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಾತಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯತ್ತ ಅನೇಕ ನಾಯಕರು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬರಲಿದ್ದಾರೆ.

ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷದಲ್ಲಿ ನಡೆಯಲಿದೆ. ಪ್ರತಿಪಕ್ಷಗಳ ಧೋರಣೆಯಿಂದ ತೀರಾ ಗೊಂದಲಕ್ಕೆ ಒಳಗಾಗಿರುವ ಹಲವಾರು ನಾಯಕರು ಮುಂದಿನ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈಗ ಒಂದು ಹಂತದಲ್ಲಿ ನಾಯಕರು ಕೇಸರಿ ಪಾಳಯಕ್ಕೆ ಬಂದಿದ್ದಾರೆ ಅಷ್ಟೇ, ಮುಂದಿನ ದಿನಗಳಲ್ಲಿ ನೋಡುತ್ತಿರಿ ಇನ್ನಷ್ಟು ಜನ ಬಿಜೆಪಿಗೆ ಬರುತ್ತಾರೆ ಎಂದು ತಿಳಿಸಿದರು.












Click it and Unblock the Notifications