ಮಾಜಿ ಸಚಿವ ಖಮರುಲ್ ಇಸ್ಲಾಂ ಹೃದಯಾಘಾತದಿಂದ ನಿಧನ
Recommended Video

ಮಾಜಿ ಸಚಿವ ಖಮರುಲ್ ಇಸ್ಲಾಂ ಹೃದಯಾಘಾತದಿಂದ ನಿಧನ | Oneindia Kannada
ಬೆಂಗಳೂರು, ಸೆಪ್ಟೆಂಬರ್ 18: ಮಾಜಿ ಸಚಿವ ಖಮರುಲ್ ಇಸ್ಲಾಂ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಹೃದಯಾಘಾತಕ್ಕೆ ಒಳಗಾಗಿದ್ದ ಖಮರುಲ್ ಇಸ್ಲಾಂ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಖಮರುಲ್ ಇಸ್ಲಾಂ ಎರಡು ಬಾರಿ ಕರ್ನಾಟಕ ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ಎಸ್.ಎಂ ಕೃಷ್ಣ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು.
ಇತ್ತೀಚೆಗೆ ಸಿದ್ದರಾಮಯ್ಯ ಸಂಪುಟದಲ್ಲಿ ವಕ್ಫ್ ಸಚಿವರಾಗಿ ಹಾಗೂ ಕಲಬುರಗಿ ಉಸ್ತುವಾರಿ ಸಚಿವರಾಗಿದ್ದರು. ನಂತರ ನಡೆದ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈ ಬಿಡಲಾಗಿತ್ತು.












Click it and Unblock the Notifications