ಮಾಜಿ ಸಚಿವ ರೇವೂ ನಾಯಕ ಬೆಳಮಗಿ ಇದ್ದ ಕಾರಿಗೆ ಅಪಘಾತ
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರ್ ಬಳಿ ಮಾಜಿ ಸಚಿವ ರೇವೂ ನಾಯಕ ಬೆಳಮಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಕಲಬುರಗಿ, ಮೇ 21: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರ್ ಬಳಿ ಮಾಜಿ ಸಚಿವ ರೇವೂ ನಾಯಕ ಬೆಳಮಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ರೇವೂ ನಾಯಕ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಮಗಿಯಿಂದ ಕಲಬುರಗಿಗೆ ರೇವೂ ನಾಯಕ್ ಅವರು ಪ್ರಯಾಣಿಸುತ್ತಿದ್ದರು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ತಡೆಗೋಡೆಗೆ ಬಲವಾಗಿ ಗುದ್ದಿದೆ. ಇದರಿಂದ ರೇವೂ ನಾಯ್ಕ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೋವಾ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ಮುಂಭಾಗ ನಜ್ಜುಗುಜ್ಜಾಗಿದೆ. ನರೋಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.












Click it and Unblock the Notifications