ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ; ಹಿಂದೂ ಕಾರ್ಯಕರ್ತರಿಗೆ ಶ್ರೀರಾಮುಲು ಕೊಟ್ಟ ಕರೆ ಏನು?
ಮೈಸೂರು, ಜುಲೈ 12: ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ. ಹಿಂದೂ ಕಾರ್ಯಕರ್ತರೇ ರಾಜ್ಯದಲ್ಲಿ ಒಬ್ಬೊಬ್ಬರೆ ಓಡಾಡಬೇಡಿ ಎಂದು ಮಾಜಿ ಸಚಿವ ಶ್ರೀರಾಮುಲು ಕರೆ ನೀಡಿದ್ದಾರೆ.
ಹತ್ಯಯಾದ ವೇಣುಗೋಪಾಲ್ ಕುಟುಂಬಸ್ಥರ ಭೇಟಿ ಬಳಿಕ ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ. ಎಲ್ಲರನ್ನು ಮುಗಿಸುವ ಪ್ರಯತ್ನವನ್ನ ಮಾಡಿದ್ದಾರೆ, ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಮೋಸ, ವಂಚನೆಯಿಂದ ಕೊಲ್ಲುತ್ತಾರೆ ಎಂದು ರಾಜ್ಯ ಸರ್ಕರದ ವಿರುದ್ದ ವಾಗ್ದಾಳಿ ನಡೆಸಿದರು.

ಇನ್ನೂ ಈ ಸರ್ಕಾರ ಬಂದ್ಮೇಲೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಇಲ್ಲಿ ಧರ್ಮದ ವಿಚಾರವಾಗಿ ನಡೆದಿರುವ ಕೊಲೆ ಇದು,ಧರ್ಮ ಅಂತ ಬಂದಾಗ ನಾವೆಲ್ಲ ಒಂದೇ, ಪಕ್ಷ ಅನ್ನೋದು ಇಲ್ಲ
ಕೊಲೆ ಬಗ್ಗೆ ತನಿಖೆ ನಡೆದ್ರೆ ಯಾರ ಕುಮ್ಮಕ್ಕು ಅಂತಾ ಗೊತ್ತಾಗುತ್ತೆ. ವೇಣುಗೋಪಾಲ್ ಫೋನ್ ಪರಿಶೀಲಿಸಿದರೆ ಯಾರು ಅನ್ನೋದು ಗೊತ್ತಾಗುತ್ತೆ. ಅವರಿಗೆ ಯಾರೆಲ್ಲ ಫೋನ್ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದರು.
ವೇಣುಗೋಪಾಲ್ ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡಿದವರು. ವೇಣುಗೋಪಾಲ್ ಯಾವುದೇ ಕ್ರಿಮಿನಲ್ ಕೆಲಸ ಮಾಡಿಲ್ಲ, ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು.
ರಾಜ್ಯದ ಎಲ್ಲಾ ಕಡೆಗಳಲ್ಲೂ ಕೊಲೆ, ಹತ್ಯೆ, ದೌರ್ಜನ್ಯ ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ ಅಂದ ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರೀಕರಿಗೆ ರಕ್ಷಣೆ ಇಲ್ಲ. ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ರಾಜ್ಯದ ಒಳಗಿನ ಜಿಹಾದಿ ಮನಃಸ್ಥಿತಿ ಇರೋ ಜನ ಎದ್ದು ಕೂರುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ ಎಂದು ಕಿಡಿಕಾರಿದರು.
ಇನ್ನೂ ಕಾಂಗ್ರೆಸ್ ಸರ್ಕಾರದ ವಿರುದ್ದ ಮತ್ತೆ ಕುಟುಕಿದ ಶ್ರೀರಾಮುಲು, ವೇಣುಗೋಪಾಲ ನ ಕುಟುಂಬದ ಕಥೆ ಏನು? ಅವರ ಮಕ್ಕಳಿಗೆ ಯಾರು ದಿಕ್ಕು. ವೇಣುಗೋಪಾಲ ನಾಯಕ ಕೊಲೆ ಪೂರ್ವ ನಿಯೋಜಿತ ಕೊಲೆ. ಜಿಹಾದಿ ಮನಃಸ್ಥಿತಿ ಜನ ಪ್ಲಾನ್ ಮಾಡಿಕೊಂಡು ಹಿಂದೂಗಳ ಕೊಲೆ ಮಾಡುತ್ತಿದ್ದಾರೆ.
ಕಾಂಗ್ರೆಸ್ ಸರಕಾರಕ್ಕೆ ಈ ಕೊಲೆಗಳ ವಿಚಾರದಲ್ಲಿ ಗಂಭೀರತೆ ಇಲ್ಲ. ಕಾಂಗ್ರೆಸ್ ನವರಿಗೆ ಅಧಿಕಾರದ ಅಹಂ ಜಾಸ್ತಿಯಾಗಿದೆ. ಸುಳ್ಳಿನ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದವರು ವೈಯಕ್ತಿಕ ವರ್ಚಸ್ಸಿನಿಂದ ಬಂದ ರೀತಿ ಮಾತಾನಾಡುತ್ತಿದ್ದಾರೆ. ವೇಣುಗೋಪಾಲ ನಾಯಕ ಹತ್ಯೆ ನಂತರ ಅವರ ಕುಟುಂಬಕ್ಕೆ ಸ್ಪಂದಿಸುವ ಕೆಲಸವನ್ನು ಜಿಲ್ಲಾ ಮಂತ್ರಿ ಮಾಡಿಲ್ಲ. ಸಿಎಂ ಸಮೇತ ಎಲ್ಲರು ಕಣ್ಮುಂಚಿ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ಕಾರ್ಯಕರ್ತರು ಮೇಲೆ ಈ ರೀತಿ ಘಟನಾವಳಿಗಳು ಮೇಲಿಂದ ಮೇಲೆ ನಡೆಯುತ್ತವೆ. ಎಲ್ಲರೂ ಸ್ವಲ್ಪ ಜಾಗರೂಕರಾಗಿರಿ. ಶವದ ಮೇಲೆ ಬಿಜೆಪಿ ಯಾವತ್ತೂ ರಾಜಕೀಯ ಮಾಡಿಲ್ಲ. ಹಿಂದೂ ಸಂಘಟನೆಯ ಕಾರ್ಯಕರ್ತರ ಹತ್ಯೆಯಾದಾಗ ಅವರ ವಿರುದ್ದ ಧ್ವನಿ ಎತ್ತುವುದು ನಮ್ಮ ಜವಾಬ್ದಾರಿ. ಪೋಲಿಸ್ ತನಿಖೆಗೆ ಒತ್ತಡಗಳು ಉಂಟಾಗುವ ಅನುಮಾನ ನಮಗೆ ಇದೆ. ಅದ್ದರಿಂದ ಸಿಬಿಐ ತನಿಖೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಶ್ರೀರಾಮುಲು ಹೇಳಿದರು.












Click it and Unblock the Notifications