ಡಿಸಿಎಂ ಡಿಕೆಶಿ ಮನೆಯಲ್ಲಿ ಕಾಣಿಸಿಕೊಂಡ ಮಾಜಿ ಸಚಿವ ಶ್ರೀರಾಮುಲು- ಕಾರಣವೇನು?

ಬೆಂಗಳೂರು, ನವೆಂಬರ್‌ 20: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್‌ ನ ಅಸಮಾಧಾನಿತ ಶಾಸಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕುತ್ತಿದ್ದು, ಇದರ ನಡುವೆ ಮಾಜಿ ಸಚಿವ ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Former Minister Sriramulu Meets DK Shivakumar

ಹೌದು, ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಲವು ಬಿಜೆಪಿ ಹಾಗೂ ಜೆಡಿಎಸ್‌ ಮಾಜಿ , ಹಾಲಿ ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಸದಾಶಿವನಗರದ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಶ್ರೀರಾಮುಲು ಭೇಟಿ ಕುರಿತು ತಮ್ಮ ಟ್ವೀಟ್‌ ನಲ್ಲಿ ಹಾಕಿಕೊಂಡಿದ್ದು, ಶ್ರೀರಾಮುಲು ಅವರು ತಮ್ಮ ಮಗಳ ಮದುವೆಗೆ ಆಹ್ವಾನ ಪತ್ರಿಕೆ ನೀಡಲು ಡಿ ಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಜನಾರ್ದನ ರೆಡ್ಡಿಗೆ ಬಿಜೆಪಿ ಗಾಳ?

ಹೌದು, ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ, ಮತ್ತೆ ಪಕ್ಷ ಸಂಘಟನೆ ಮಾಡುವುದು ಅನಿವಾರ್ಯವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಳೆಯ ನಾಯಕರಿಗೆ ಗಾಳ ಹಾಕಲು ಮುಂದಾಗಿದೆ. ರಾಜ್ಯದಲ್ಲಿ ಲೋಕಸಭೆ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಜ್ಜಾಗುತ್ತಿದ್ದು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನ ಬಿಜೆಪಿಗೆ ಕರೆತರಲು ತಯಾರಿ ನಡೆಸಿದೆ.

ಅಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆ ಗಾಲಿ ಜನಾರ್ದನ ರೆಡ್ಡಿ ಕಳೆದ ಒಂದು ದಶಕದಿಂದ ರಾಜಕೀಯದಿಂದ ದೂರ ಉಳಿದಿದ್ದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದರು. ನಂತರ ಕೊಪ್ಪಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಸಿದ್ದಾರೆ.

ಬಳ್ಳಾರಿ ನಗರ ಕ್ಷೇತ್ರದಿಂದ ಸಹೋದರ ಸೋಮಶೇಖರ್‌ ರೆಡ್ಡಿ ವಿರುದ್ಧ, ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಕಣಕ್ಕಿಳಿಸಿ ಬಿಜೆಪಿಗೇ ಸೆಡ್ಡು ಹೊಡೆದಿದ್ದರು. ಮುಂಬರುವ ಚುನಾವಣೆಗಳಲ್ಲಿ ಕೆಆರ್‌ಪಿಪಿಯಿಂದ ಎದುರಾಗಬಹುದಾದ ಪರಿಣಾಮಗಳನ್ನು ತಡೆಯಲು ಮತ್ತು ಕಾಂಗ್ರೆಸ್‌ಗೆ ತಿರುಗೇಟು ನೀಡಲು ಜನಾರ್ದನರೆಡ್ಡಿ ಬಿಜೆಪಿಗೆ ಅನಿವಾರ್ಯವಾಗಿದ್ದು, ಜನಾರ್ದನ ರೆಡ್ಡಿಯವರನ್ನ ಮರಳಿ ಬಿಜೆಪಿಗೆ ಕರೆತರುವ ಪ್ರಯತ್ನಯನ್ನ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನಡೆಸುತ್ತಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+