ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್? ಯಾವ ಕ್ಷೇತ್ರದಿಂದ ಸ್ಪರ್ಧೆ ಗೊತ್ತಾ?
ಬೆಂಗಳೂರು, ನವೆಂಬರ್ 16: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಮೈತ್ರಿ ಸರ್ಕಾರದ ವೇಳೆ ಬಿಜೆಪಿ ಸೇರಿದ್ದ ಹಲವು ನಾಯಕರು ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಶುರವಾಗಿದೆ.
ಈಗಾಗಲೇ ಮಾಜಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ನತ್ತ ಮುಖ ಮಾಡಿದ ಬೆನ್ನಲ್ಲೇ ಇದೀಗ ಇನ್ನೊಬ್ಬ ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವನ್ನ ಎಸ್ ಟಿ ಸೋಮಶೇಖರ್ ಹಾಡಿಹೊಗಳಿದ್ರು.

2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. . ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಅಭಿಮಾನಿ ನಾನು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ರು.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರನ್ನ ಕೆಲ ತಿಂಗಳ ಹಿಂದೆಯಷ್ಟೇ ಎಸ್ ಟಿ ಸೋಮಶೇಖರ್ ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ ಕನಿಷ್ಠ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಕನಿಷ್ಠ ಎರಡು ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ಕಾಂಗ್ರೆಸ್ ಗಾಳ ಹಾಕಿದೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಈ ಕ್ಷೇತ್ರವನ್ನ ಗೆಲ್ಲಲ್ಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ಯಶವಂತಪುರ ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, ಹೆಚ್ಚು ವರ್ಚಸ್ಸನ್ನ ಹೊಂದಿರುವ ಎಸ್ ಟಿ ಸೋಮಶೇಖರ್ ಅವರನ್ನ ಕಾಂಗ್ರೆಸ್ ಕರೆತರುವ ಪ್ರಯತ್ನ ನಡೆದಿದ್ದು, ಎರಡು ಆಫರ್ ಗಳನ್ನ ಮುಂದಿಟ್ಟು ಕಾಂಗ್ರೆಸ್ ಗೆ ಕರೆತರುವ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.
ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಅವರನ್ನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಯಶವಂತಪುರ ವಿಧಾನಸಭೆ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಹೀಗಾಗಿ ಬೆಂಗಳೂರು ಉತ್ತರ ಕ್ಷೇತ್ರವನ್ನ ಸುಲಭವಾಗಿ ಗೆಲ್ಲಬಹುದು ಎಂಬ ಹಲವು ತಂತ್ರಗಾರಿಕೆಯನ್ನ ಕಾಂಗ್ರೆಸ್ ನಾಯಕರು ನಡೆಸಿದ್ದಾರೆ.
ಇನ್ನೂ ಕಾಂಗ್ರೆಸ್ ನಾಯಕರು ಕೇವಲ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಎಸ್ ಟಿ ಸೋಮಶೇಖರ್ ಅವರನ್ನ ಮತ್ತೆ ಪಕ್ಷಕ್ಕೆ ಕರೆದುಕೊಳ್ಳುತ್ತಿಲ್ಲ, ಬಿಬಿಎಂಪಿ ಚುನಾವಣೆಯ ದೃಷ್ಟಿಯಿಂದಲೂ ಮೂಲ ಕಾಂಗ್ರೆಸ್ಸಿಗರನ್ನ ಸೆಳೆಯಲು ಕೈ ನಾಯಕರು ಮುಂದಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ನೀಡುವ ಚಿಂತನೆ ನಡೆದಿದ್ದು, ಯಶವಂತಪುರ ಕ್ಷೇತ್ರಕ್ಕೆ ಎಸ್ ಟಿ ಸೋಮಶೇಖರ್ ಪುತ್ರನಿಗೆ ಟಿಕೆಟ್ ನೀಡುವ ಆಫರ್ ನೀಡಿದ್ದಾರೆ ಎನ್ನಲಾಗಿದೆ












Click it and Unblock the Notifications