ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಚಿವ ತಿಪ್ಪೇಸ್ವಾಮಿಗೆ 'ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ'

By Sachhidananda Acharya
|
Google Oneindia Kannada News

ಬೆಂಗಳೂರು, ಅಕ್ಟೋಬರ್ 5: ಪ್ರಸಕ್ತ ಸಾಲಿನ 'ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ'ಗೆ ಮಾಜಿ ಸಚಿವ ತಿಪ್ಪೇಸ್ವಾಮಿಯವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ಪ್ರಶಸ್ತಿ ಮೊತ್ತ ಹಾಗೂ ಫಲಕವನ್ನು ವನ್ನು ಒಳಗೊಂಡಿದೆ.

ವಾಲ್ಮೀಕಿ ವಿರಚಿತ ರಾಮಾಯಣ ಅಂದಿಗೂ-ಇಂದಿಗೂ ಪ್ರಸ್ತುತವಾಲ್ಮೀಕಿ ವಿರಚಿತ ರಾಮಾಯಣ ಅಂದಿಗೂ-ಇಂದಿಗೂ ಪ್ರಸ್ತುತ

ಚಳ್ಳಕೆರೆಯ ಮಾಜಿ ಸಚಿವ ಶ್ರೀ ತಿಪ್ಪೇಸ್ವಾಮಿ ಅವರಿಗೆ 2017ನೇ ಸಾಲಿನ 'ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ'ಯನ್ನು ನೀಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷೆ ಪ್ರೊ. ಸುಕನ್ಯಾ ಮಾರುತಿ ಬುಧವಾರ ಘೋಷಿಸಿದರು.

Former minister Thippeswamy gets 'Sri Maharshi Valmiki Award'

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಶಸ್ತಿ ಕೋರಿ 26 ಅರ್ಜಿಗಳು ಬಂದಿದ್ದವು. 26 ಅರ್ಜಿಗಳಲ್ಲಿ ಎರಡು ಅರ್ಜಿಗಳನ್ನು ವಯೋಮಾನದ ಕಾರಣದಿಂದ ತಿರಸ್ಕರಿಸಲಾಯಿತು. ಇನ್ನುಳಿದ 24 ಅರ್ಜಿಗಳಲ್ಲಿ ಅವರ ಅನುಭವ, ಸಾಧನೆ, ಬುಡಕಟ್ಟು ಜನರ ಸೇವೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಆಧರಿಸಿ ಮಾಜಿ ಸಚಿವ ತಿಪ್ಪೇಸ್ವಾಮಿ ಅವರನ್ನು ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿದೆ," ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, "ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಈ ಬಾರಿ ವೈಶಿಷ್ಟ್ಯಪೂರ್ಣವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ," ಎಂದರು.

ಪ್ರತಿ ವರ್ಷ ವಾಲ್ಮೀಕಿ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ಸರ್ಕಾರ ನೀಡುತ್ತಾ ಬಂದಿದೆ. ಈ ಬಾರಿ ಅಕ್ಟೋಬರ್ 5 ರಂದು ನಡೆಯುವ ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪುರಸ್ಕೃತರಿಗೆ 5.00 ಲಕ್ಷ ರೂ. ನಗದು ಹಾಗೂ ಫಲಕ ನೀಡಿ ಸನ್ಮಾನಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

English summary
Former minister Tippeswamy has been selected for the 'Sri Maharshi Valmiki Award' for the current year. The award includes a cash prize of Rs.5 lakhs and a memento.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X