ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಮಾಜಿ ಶಾಸಕ ಜೆ.ಡಿ.ನಾಯ್ಕ್

|
Google Oneindia Kannada News

Recommended Video

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಮಾಜಿ ಶಾಸಕ ಜೆ.ಡಿ.ನಾಯ್ಕ್ | Oneindia Kannada

ಬೆಂಗಳೂರು, ಫೆಬ್ರವರಿ 20 : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಭಟ್ಕಳ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಜೆ.ಡಿ.ನಾಯ್ಕ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. 2017ರಲ್ಲಿ ಅವರು ಬಿಜೆಪಿ ಸೇರಿದ್ದರು.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜೆ.ಡಿ.ನಾಯ್ಕ್ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ಸೇರಿದ ಮಾಜಿ ಶಾಸಕ ಜೆ.ಡಿ.ನಾಯ್ಕ್ಬಿಜೆಪಿ ಸೇರಿದ ಮಾಜಿ ಶಾಸಕ ಜೆ.ಡಿ.ನಾಯ್ಕ್

Former MLA JD Naik

2017ರ ಮಾರ್ಚ್ 9ರಂದು ಜೆ.ಡಿ.ನಾಯ್ಕ್ ಅವರು ಬಿಜೆಪಿ ಸೇರಿದ್ದರು. ಕರ್ನಾಟಕ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಜೆ.ಡಿ.ನಾಯ್ಕ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದರು.

ಭಟ್ಕಳ : ಮತೀಯ ಸೂಕ್ಷ ಕ್ಷೇತ್ರದ ಪರಿಚಯಭಟ್ಕಳ : ಮತೀಯ ಸೂಕ್ಷ ಕ್ಷೇತ್ರದ ಪರಿಚಯ

ಜೆ.ಡಿ.ನಾಯ್ಕ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, 'ಕೆಲವು ಕಾರಣಗಳಿಂದಾಗಿ ಜೆ.ಡಿ.ನಾಯ್ಕ್ ಅವರು ಬಿಜೆಪಿ ಸೇರಿದ್ದರು. ಈಗ ಅವರು ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್ ಆಗಿದ್ದಾರೆ' ಎಂದರು.

ಭಟ್ಕಳ-ಹೊನ್ನಾವರ ಕ್ಷೇತ್ರದಿಂದ 2008ರ ಚುನಾವಣೆಯಲ್ಲಿ 49079 ಮತಗಳನ್ನು ಪಡೆದು ಜೆ.ಡಿ.ನಾಯ್ಕ್ ಶಾಸಕರಾಗಿ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ 21766 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿಯೂ ಅವರು ಭಟ್ಕಳ-ಹೊನ್ನಾವರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಸುನೀಲ್ ನಾಯ್ಕ್ ಅವರಿಗೆ ಟಿಕೆಟ್ ನೀಡಿತ್ತು. ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

English summary
Former MLA J.D.Naik joined Congress and quit the BJP. He contested for 2013 assembly election from Bhatkal-Honnavar constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X