• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನ

|
Google Oneindia Kannada News

ಬೆಂಗಳೂರು, ನವೆಂಬರ್ 25; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನರಾದರು. ವರ್ತೂರು ಕೋಡಿ ಬಳಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಶುಕ್ರವಾರ ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಆಗಮಿಸಿದ್ದರು. ಸಭೆಯ ಆರಂಭದಲ್ಲಿಯೇ ಅವರು ವಾಂತಿ ಮಾಡಿಕೊಂಡು ಕುಸಿದು ಬಿದ್ದರು. ತಕ್ಷಣ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು.

Breaking; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತBreaking; ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ

ಶ್ರೀ ಶೈಲಪ್ಪ ಬಿದರೂರು 1996ರಲ್ಲಿ ರೋಣ ಕ್ಷೇತ್ರದಿಂದ ಜನತಾದಳ ಪಕ್ಷದಿಂದ ಶಾಸಕರಾಗಿದ್ದರು. ಹೀಗೆ ತಮ್ಮ ರಾಜಕೀಯ ಜೀವನದಲ್ಲಿ ಮಹತ್ವದ ಹೆಜ್ಜೆ ಇರಿಸಿದ ಅವರು, 2008ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಗದಗ ಶಾಸಕರಾದರು. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಕೆ.ಪಾಟೀಲ್ ವಿರುದ್ಧ ಸೋಲು ಕಂಡರು. ಮುಂದಿನ ಚುನಾವಣೆ 2018ರಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ಮೇಲೆ ಅಸಮಾಧಾನಗೊಂಡು 2019ರಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಸದ್ಯ ಕಾಂಗ್ರೆಸ್‌ನಿಂದ ಮುಂಬರುವ ಚುನಾವಣೆಯಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ರೋಣ ಅಥವಾ ಗದಗ ಮತಕ್ಷೇತ್ರದಿಂದ ಸ್ಪರ್ಧೆ ಮಾಡಲು ಬಯಸಿದ್ದ ಅವರು, ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಹಾಕಿದ್ದರು.

ಶ್ರೀಶೈಲಪ್ಪ ಬಿದರೂರು ನಿಧನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಮುಂದೂಡಲಾಗಿದ್ದು, ನವೆಂಬರ್‌ 27ಕ್ಕೆ ಸಭೆ ನಿಗದಿ ಮಾಡಲಾಗಿದೆ.

ಶ್ರೀಶೈಲಪ್ಪ ಬಿದರೂರು ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕರು ಹಾಗೂ ಹಿರಿಯ ನಾಯಕರಾದ ಶ್ರೀಶೈಲಪ್ಪ ಬಿದರೂರು ಅವರು ಹೃದಯಾಘಾತದಿಂದ ಸಾವಿಗೀಡಾದ ವಿಷಯ ಮನಸ್ಸಿಗೆ ಭಾರೀ ನೋವುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಹಮ್ಮಿಕೊಂಡಿದ್ದ ಪಕ್ಷದ ಟಿಕೆಟ್‌ ಆಕಾಂಕ್ಷಿಗಳೊಟ್ಟಿಗಿನ ಸಭೆಯನ್ನು ಮುಂದೂಡಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ನೋವಿನಲ್ಲಿ ನಾನೂ ಕೂಡ ಭಾಗಿ ಎಂದು ಸಂತಾಪ ಸೂಚಿಸಿದ್ದಾರೆ.

English summary
Congress leader and former MLA Shrishailappa Bidarur No more. He admitted to hospital due to heart attack. He is two term MLA of Ron & Gadag constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X