ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಜೆಡಿಎಸ್‌ ಬಿಟ್ಟು ಕಾಂಗ್ರೆಸ್ ಸೇರಿದ ಮಾಜಿ ಶಾಸಕಿ

|
Google Oneindia Kannada News

ಬೆಂಗಳೂರು, ಜನವರಿ 20; ಮಾಜಿ ಶಾಸಕಿ, ಜೆಡಿಎಸ್ ನಾಯಕಿ ಸುನೀತಾ ವೀರಪ್ಪ ಗೌಡ ಕಾಂಗ್ರೆಸ್ ಸೇರಿದ್ದಾರೆ. ಈ ಬೆಳವಣಿಗೆಯಿಂದಾಗಿ ಟಿ. ನರಸೀಪುರ ಕ್ಷೇತ್ರದ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಆರಂಭವಾಗಿದೆ.

ಶುಕ್ರವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಸುನೀತಾ ವೀರಪ್ಪ ಗೌಡ ಸೇರಿದಂತೆ ಅನೇಕ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರಿದರು. ಮಾಜಿ ಸಚಿವ ಡಾ. ಎಚ್‌. ಸಿ. ಮಹದೇವಪ್ಪ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.

ತಿ. ನರಸೀಪುರ ವಿಧಾನಸಭಾ ಕ್ಷೇತ್ರದತ್ತ ಕುತೂಹಲ ಏಕೆ?ತಿ. ನರಸೀಪುರ ವಿಧಾನಸಭಾ ಕ್ಷೇತ್ರದತ್ತ ಕುತೂಹಲ ಏಕೆ?

ಟಿ. ನರಸೀಪುರ ಕ್ಷೇತ್ರದಿಂದ ಒಮ್ಮೆ ಸುನೀತಾ ವೀರಪ್ಪ ಗೌಡ ಶಾಸಕಿಯಾಗಿ ಆಯ್ಕೆಯಾಗಿದ್ದರು. ಬಳಿಕ ಅವರು ಬಿಜೆಪಿ ಪಕ್ಷವನ್ನು ಸೇರಿದ್ದರು. ಬಳಿಕ ಜೆಡಿಎಸ್ ಸೇರಿದ್ದರು. ಈಗ ಮತ್ತೆ ಕಾಂಗ್ರೆಸ್‌ಗೆ ವಾಪಸ್ ಆಗಿದ್ದಾರೆ.

ಟಿ. ನರಸೀಪುರ ಕ್ಷೇತ್ರ : ಕಾಂಗ್ರೆಸ್ಸಿಗೆ ಗೆಲುವು ಕಷ್ಟ ಕಷ್ಟ?ಟಿ. ನರಸೀಪುರ ಕ್ಷೇತ್ರ : ಕಾಂಗ್ರೆಸ್ಸಿಗೆ ಗೆಲುವು ಕಷ್ಟ ಕಷ್ಟ?

Former MLA Sunitha Veerappa Gowda Quits JDS Joins Congress

ನಾಲ್ಕು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯೆ, ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಜೆ. ಸುನೀತಾ ವೀರಪ್ಪ ಗೌಡ 2004ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಮತ್ತೆ ಅವರು ಜಿಲ್ಲಾ ಪಂಚಾಯಿತಿ ಸದಸ್ಯೆಯಾದರು.

Karnataka assembly elections: ಪಂಚರತ್ನ ಯಾತ್ರೆಯೆಡೆ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಕಡೆಗೆ ಜೆಡಿಎಸ್ ನಾಯಕರುKarnataka assembly elections: ಪಂಚರತ್ನ ಯಾತ್ರೆಯೆಡೆ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಕಡೆಗೆ ಜೆಡಿಎಸ್ ನಾಯಕರು

ಸುನೀತಾ ವೀರಪ್ಪ ಗೌಡ ಜೊತೆ ಬೀರ ಹುಂಡಿ ಬಸವಣ್ಣ, ಮಾದೇಗೌಡ ಮಾವಿನಹಳ್ಳಿ, ಸಿದ್ದೇಗೌಡ ಹಿನಕಲ್, ಕೆಂಪನಾಯಕ ಸೇರಿದಂತೆ ಹಲವಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.

ಕೆಲವು ದಿನಗಳ ಹಿಂದೆ ಸುನೀತಾ ವೀರಪ್ಪ ಗೌಡ ಬನ್ನೂರಿನ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಬೆಂಬಲಿಗರ ಸಭೆ ನಡೆಸಿದ್ದರು. ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಟಿ. ನರಸೀಪುರ ಕ್ಷೇತ್ರದ ಮಾಜಿ ಶಾಸಕರು ಎಚ್. ಸಿ. ಮಹದೇವಪ್ಪ. 2018ರ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕಾಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ಚುರುಕಾಗಿದ್ದಾರೆ.

English summary
Former MLA and JD(S) leader Sunitha Veerappa Gowda quits party and joined Congress in the presence of leader of opposition Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X