ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್ ಭಟ್

ಬೆಂಗಳೂರು,ಡಿಸೆಂಬರ್ 15: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಗುರುವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್ಆರ್ ಟಿಸಿ ಚೇರ್ಮನ್ ಆಗಿದ್ದರು.

Former Mla V s Patil, Srinivas bhat and Others Joined Congress Party

ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ.

ಇನ್ನು ಬಿಜೆಪಿಯ ಸಕ್ರಿಯ ನಾಯಕರಾದ ಜಿಲ್ಲಾ ಖಜಾಂಚಿಗಳಾದ ಉದ್ಯಮಿ ಶ್ರೀನಿವಾಸ್ ಭಟ್ ದಾತ್ರಿ ಅವರು ಕೂಡ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇವರು ಉತ್ತಮ ಸಂಘಟನಕಾರರಾಗಿದ್ದು, ಬಹಳ ಸೇವೆ ಮಾಡಿರುವ ಕುಟುಂಬದಿಂದ ಬಂದಿದ್ದಾರೆ. ಯಲ್ಲಾಪುರ ಕ್ಷೇತ್ರದ ಯುವಕರಲ್ಲಿ ಬಹಳ ಚಿರಪರಿಚಿತರಾಗಿದ್ದಾರೆ. ಅವರು ಕೂಡ ದೇಶಪಾಂಡೆ ಹಾಗೂ ನನ್ನನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಇವರು ಕೂಡ ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರು ಸಲ್ಲಿಸಿದ ಅರ್ಜಿ ಮೇಲೆ ನಾವೆಲ್ಲರೂ ಚರ್ಚೆ ಮಾಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ.

ಇನ್ನು ಬಹಳ ಅರ್ಜಿಗಳು ಬಾಕಿ ಇವೆ. ಇಂದು ಇನ್ನಿಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾಗಿತ್ತು, ಅವರ ಆರೋಗ್ಯ ಸರಿ ಇಲ್ಲದ ಕಾರಣ ಸೇರ್ಪಡೆ ಕಾರ್ಯಕ್ರಮ ಮುಂದೂಡಿದ್ದೇವೆ. ಕೆಲವರು ಅಧಿವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಪ್ರತಿವಾರ ಸಭೆ ಮಾಡಿ ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಮಧ್ಯೆ ನಮ್ಮ ಪ್ರವಾಸಗಳು ನಿಗಧಿಯಾಗಿವೆ. ಈ ಪ್ರವಾಸ ಸಂದರ್ಭದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು.

Former Mla V s Patil, Srinivas bhat and Others Joined Congress Party

ಡಿ.30 ರಂದು ಬಿಜಾಪುರದಲ್ಲಿ ಕೃಷ್ಣಾ ನದಿ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ. ಜ.2 ರಂದು ಮಹದಾಯಿ ವಿಚಾರದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಲಿದ್ದೇವೆ. ಸರ್ಕಾರ ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಜ.8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇನ್ನು ನಾನು ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ಭಾರತ ಜೋಡೋ ಯಾತ್ರೆ ಸಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು.

ಈ ಪ್ರವಾಸದ ನಂತರ 224 ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಪ್ರವಾಸ ಮಾಡುತ್ತೇವೆ. ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಹಾಗೂ ದಕ್ಷಿಣ ಭಾಗದಲ್ಲಿ ನಾನು ಪ್ರವಾಸ ಮಾಡುತ್ತೇನೆ. ನಂತರ ಅವರು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಾಡುತ್ತಾರೆ. ನಾನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೋಗುತ್ತೇನೆ. ಈ ಪ್ರವಾಸದಲ್ಲಿ ಕೇವಲ ನಾವಿಬ್ಬರೂ ಮಾತ್ರವಲ್ಲ, ನಮ್ಮ ಪಕ್ಷದ ಎಲ್ಲ ಹಿರಿಯ ನಾಯಕರು ಭಾಗವಹಿಸುತ್ತಾರೆ. ಈ ರೀತಿ 224 ಕ್ಷೇತ್ರಗಳಲ್ಲೂ ನಾವು ಪ್ರವಾಸ ಮಾಡುತ್ತೇವೆ. ಬೆಳಗಾವಿಯಲ್ಲಿ ನಾವು ನಮ್ಮ ನಾಯಕರ ಜತೆ ಚರ್ಚೆ ಮಾಡಿ ಪ್ರವಾಸದ ಪ್ರಯಾಣ ನಕ್ಷೆ ಅಂತಿಮಗೊಳಿಸಲಾಗುವುದು. ಮಾಧ್ಯಮಗಳು ನಾವು ಹೆಲಿಕಾಪ್ಟರ್ ಪ್ರವಾಸ ಮಾಡುವುದಾಗಿ ವರದಿ ಮಾಡಿವೆ. ನಮಗೆ ಇನ್ನು ಆ ಸಂದರ್ಭ ಬಂದಿಲ್ಲ. ಚುನಾವಣೆ ಸಮಯದಲ್ಲಿ ಕೆಲವೊಮ್ಮೆ ತುರ್ತಾಗಿ ಪ್ರವಾಸ ಮಾಡುವಾಗ ಹೆಲಿಕಾಪ್ಟರ್ ಬಳಸಲಾಗುವುದು. ಆದರೆ ಅದು ಹೆಲಿಕಾಪ್ಟರ್ ಯಾತ್ರೆ ಇಲ್ಲ. ನಾವು ಜನರಿಗಾಗಿ, ಜನರಿಗೋಸ್ಕರ, ಜನರ ಮಧ್ಯೆ, ಅವರ ಧ್ವನಿಯಾಗಿ ಅವರ ವಿಚಾರ ಅರಿತು ಚುನಾವಣೆಗೆ ತಯಾರಾಗುತ್ತಿದ್ದೇವೆ' ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+