DK Suresh: ಚನ್ನಪಟ್ಟಣ ಉಪಚುನಾವಣೆ: ಶಾಕಿಂಗ್ ಸುದ್ದಿ ಕೊಟ್ಟ ಮಾಜಿ ಸಂಸದ ಡಿಕೆ ಸುರೇಶ್!
ಬೆಂಗಳೂರು, ಜೂನ್.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿಕೆ ಸುರೇಶ್ ಅವರು ತಮ್ಮ ಸೋಲಿನಿಂದ ಬೇಸರದಲ್ಲಿದ್ದಾರೆ ಎಂಬುದು ಎಲ್ಲರಿಗೂ ತಿಳಿಯುತ್ತಿದೆ. ತಮ್ಮನನ್ನು ಮತ್ತೆ ರಾಜಕೀಯಕ್ಕೆ ಕರೆತರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹೀಗಾಗಿಯೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಕಣಕ್ಕಿಳಿಯುವ ಬಗ್ಗೆ ಮಾತನಾಡಿದ್ದಾರೆ.
ಆದರೆ, ಲೋಕಸಭಾ ಚುನಾವಣಾ ಸೋಲಿನಿಂದ ಒತ್ತಡದಲ್ಲಿದ್ದ ಮಾಜಿ ಸಂಸದ ಡಿಕೆ ಸುರೇಶ್ ರಾಜಕೀಯದಿಂದ ದೂರ ಸರಿಯುವ ಬಗ್ಗೆ ಮಾತನಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಮಂಡ್ಯ ಸಂಸದ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವು ನಿಲ್ಲುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ!
ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮಾಜಿ ಸಂಸದ ಡಿಕೆ ಸುರೇಶ್, ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಜನ ನನಗೆ ರೆಸ್ಟ್ ಕೊಟ್ಟಿದ್ದಾರೆ, ರೆಸ್ಟ್ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಾನು ಚುನಾವಣೆಗೆ ನಿಲ್ಲುವುದು ಇದೆಲ್ಲವೂ ಮಾಧ್ಯಮಗಳ ಊಹಾಪೋಹವಷ್ಟೇ. ಚುನಾವಣೆ ಸೋಲಿನಿಂದ ನಾನು ಒತ್ತಡದಲ್ಲಿದ್ದೆ, ಸದ್ಯ ಅದರಿಂದ ಹೊರಗಡೆ ಬಂದಿದ್ದೇನೆ ಎಂದಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಆಘಾತ ನೀಡಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಸ್ಪರ್ಧೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, "ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ನನ್ನ ಮುಂದೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಡಿಸಿಎಂ ತೀರ್ಮಾನ ತೆಗೆದುಕೊಳ್ಳುತ್ತಾರೆ" ಎಂದಿದ್ದಾರೆ.

ಡಿಕೆ ಶಿವಕುಮಾರ ಸ್ಪರ್ಧಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ!
ಇನ್ನು, ಚನ್ನಪಟ್ಟಣದಿಂದ ಉಪಮುಖ್ಯಮಂತ್ರಿ, ಸಹೋದರ ಡಿಕೆ ಶಿವಕುಮಾರ್ ಸ್ಪರ್ಧಿಸುವ ಬಗ್ಗೆ ಮಾತನಾಡಿರುವ ಅವರು, ಡಿಕೆ ಶಿವಕುಮಾರ ಸ್ಪರ್ಧಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಡಿಕೆಶಿ ಅವರು ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಿದ್ದಾರೆ ಎಂದಿದ್ದಾರೆ. ಸೂಕ್ತ ಅಭ್ಯರ್ಥಿಯನ್ನ ನಮ್ಮ ಪಕ್ಷ ಕಣಕ್ಕಿಳಿಸುತ್ತೆ. ನಾನೂ ಕೂಡಾ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ತನ್ನ ಸಹೋದರನನ್ನು ಮತ್ತೆ ಶಾಸಕನಾಗಿ ಮಾಡಲು ಡಿಕೆ ಶಿವಕುಮಾರ್ ಪಣ ತೊಟ್ಟಿದ್ದಾರೆ. ತಾವು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು, ತನ್ನ ಕನಕಪುರ ವಿಧಾನಸಭಾ ಕ್ಷೇತ್ರವನ್ನು ತಮ್ಮನಿಗೆ ಬಿಟ್ಟುಕೊಡುವ ಯೋಜನೆಯಲ್ಲಿದ್ದಾರೆ. ಹೀಗಾಗಿ ಜನ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ನಿಲ್ಲುತ್ತೇನೆ ಎನ್ನುತ್ತಿದ್ದಾರೆ.
ಇತ್ತ, ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಕಣಕ್ಕೆ ಇಳಿಯುತ್ತಾರೆ ಎನ್ನುವ ಸುದ್ದಿ ಹಬ್ಬುತ್ತಿದ್ದ ಹಾಗೆಯೇ ಚನ್ನಪಟ್ಟಣದ ಮಾಜಿ ಶಾಸಕ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೂಡ ಕಣಕ್ಕಿಳಿದಿದ್ದಾರೆ. ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಂತೆಯೇ ಚನ್ನಪಟ್ಟಣದಲ್ಲಿಯೂ ದೊಡ್ಡ ಗೆಲುವು ಸಾಧಿಸುವ ಭರವಸೆ ನೀಡಿದ್ದಾರೆ. ಹೀಗಾಗಿಯೇ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯ ಬಗ್ಗೆ ದೊಡ್ಡ ಚರ್ಚೆಯೆ ನಡೆಯುತ್ತಿದೆ. ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಇಲ್ಲಿಂದ ಪ್ರಬಲ ಆಕಾಂಕ್ಷಿ ಎಂಬುದನ್ನು ಮರೆಯುವಂತಿಲ್ಲ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications