Get Updates
Get notified of breaking news, exclusive insights, and must-see stories!

ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ

ಕಲಬುರಗಿ, ಮೇ 22: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಆಪ್ತರು ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ಅವರು (81) ವಿಧಿವಶರಾಗಿದ್ದಾರೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಸರಡಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ. ಧರ್ಮ ಸಿಂಗ್ ಪರಮಾಪ್ತರಲ್ಲಿ ಒಬ್ಬರಾಗಿದ್ದರು. ಕಲಬುರಗಿ ನಗರದಲ್ಲಿ 1944 ಜೂನ್ 5ರಂದು ಜನಿಸಿದ ಸರಡಗಿ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎ, ಎಲ್ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು.

Former MP Iqbal Ahmed Sardagi passed away

ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ಅವರು ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ. ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ. ಸಂಜೆ 6 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. "ನಮ್ಮ ಪಕ್ಷದ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿದ್ದ ಸರಡಗಿ ಅವರು ಲೋಕಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಪಾಲಿಕೆ ಸದಸ್ಯ ಸ್ಥಾನದಿಂದ ಲೋಕಸಭಾ ಸದಸ್ಯ ಸ್ಥಾನದವರೆಗೂ ಸುದೀರ್ಘ ರಾಜಕೀಯ ಪಯಣ ಮಾಡಿದ್ದಾರೆ. ಅವರ ಅಗಲಿಕೆ ಪಕ್ಷಕ್ಕೆ ನಷ್ಟ ಎಂದೇ ಭಾವಿಸುತ್ತೇನೆ. ಶಿಕ್ಷಣತಜ್ಞರು, ಪರೋಪಕಾರಿಯಾಗಿ ಗುರುತಿಸಿಕೊಂಡಿರುವ ಸರಡಗಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ಕಲಬುರ್ಗಿಯ ಮಾಜಿ ಸಂಸದ, ವಿಧಾನಪರಿಷತ್ತಿನ ಮಾಜಿ ಸದಸ್ಯ ಇಕ್ಬಾಲ್ ಅಹ್ಮದ್ ಸರಡಗಿ ಮತ್ತು ಗೋಕಾಕದ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಾಕಾಯು ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನೂ ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯರು, ಕಾಂಗ್ರೆಸ್ ನ ಹಿರಿಯ ಮುಖಂಡರೂ ಆಗಿದ್ದ ಇಕ್ಬಾಲ್ ಅಹ್ಮದ್ ಸರಡಗಿ (80) ಅವರು ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ನಾಯಕರಾಗಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದ ಶ್ರೀ ಸರಡಗಿ ಅವರು, ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು, ಅವರ ಸಾವಿನ ಸುದ್ದಿ ತಿಳಿದು ದುಃಖವಾಗಿದೆ ಎಂದು ತಿಳಿಸಿದ್ದಾರೆ.

ಕಾನೂನು ಪದವೀಧರರಾಗಿದ್ದ ಶ್ರೀಯುತರು 1999 ಮತ್ತು 2004ರಲ್ಲಿ ಸಂಸತ್ ಸದಸ್ಯರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ನಾಡಿಗೆ ನೀಡಿರುವ ಕೊಡುಗೆ ಸ್ಮರಣಾರ್ಹವಾದದ್ದು. ಈ ನೋವಿನ ಸಂದರ್ಭದಲ್ಲಿ ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ ಅವರ ಕುಟುಂಬದವರಿಗೆ, ಬಂಧು-ಮಿತ್ರರು ಮತ್ತು ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+