ಮಂಡ್ಯ ಜನ ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದ ನಾಲಿಗೆ ಹರಿಬಿಟ್ಟ ಶಿವರಾಮೇಗೌಡ
ಮಂಡ್ಯ, ಅಕ್ಟೋಬರ್ 26: ಮಾಜಿ ಸಂಸದ ಎಲ್ಆರ್ ಶಿವರಾಮೇಶಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಂಡ್ಯ ಜಿಲ್ಲೆಯ ಜನರ ಬಗ್ಗೆ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಮನಗರದಿಂದ ಕುಮಾರಸ್ವಾಮಿಯನ್ನ ಓಡಿಸಿದ್ದಾರೆ. ಆದರೆ ಮಂಡ್ಯದವರೆಲ್ಲಾ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸಿದ್ದಾರೆ. ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರು ಮಾಡುವ ಅಗತ್ಯವಿಲ್ಲ, ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಮಂಡ್ಯ ಜಿಲ್ಲೆಯ ಜನತೆಗೆ ಕರೆ ಕೊಡ್ತೀನಿ ಎಂದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಜನತೆಗೆ ಕರೆ ಕೊಡುತ್ತೇನೆ "ಗಂಡಸರಾಗ್ರಪ್ಪ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿ.ಪಿ.ಯೋಗೇಶ್ವರ್ ರೀತಿ ನಾನು ಕೂಡ ಜಂಪಿಂಗ್ ಸ್ಟಾರ್. ಸಂಸದ ಡಾ. ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ಸಿಪಿ ಯೋಗೇಶ್ವರ್ ಶ್ರಮವಹಿಸಿದರು. ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರನ್ನೇ ಬಲಿ ಪಡೆದಿದ್ದಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.
ನಾನು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ, ಕಾಂಗ್ರೆಸ್ ಸೇರಲು ನಿರ್ಧಾರ ಮಾಡಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಕಟ್ಟುವ ಉದ್ದೇಶದಿಂದ ಪಕ್ಷ ಸೇರಿದ್ದೆ. ವಿಧಾನಸಭೆ ಸೋಲಿನ ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಆಯ್ತು. ಸಂಘಟನೆ ದೃಷ್ಠಿಯಿಂದ ಜೆಡಿಎಸ್‌ಗೆ ಮಂಡ್ಯ ಜಿಲ್ಲೆ ಬಿಟ್ಟು ಕೊಡದಂತೆ ವಿಜಯೇಂದ್ರ ಬಳಿ ಮನವಿ ಮಾಡಿದ್ದೇನು. ಯಾರಿಗೂ ಬಿಟ್ಟುಕೊಡುವ ಪ್ರಶ್ನೆ ಇಲ್ಲ, ಪಾರ್ಟಿ ಕಟ್ಟುತ್ತೇನೆ ಎಂದು ವಿಜಯೇಂದ್ರ ಭರವಸೆ ಕೊಟ್ಟಿದ್ದರು. ಆದರೆ ಸಾರಾಸಗಟಾಗಿ ಬಿಜೆಪಿಯನ್ನ ಜೆಡಿಎಸ್‌ನವರು ಕತ್ತುಹಿಸುಕಿದರು. ಹೊಂದಾಣಿಕೆ ಬಳಿಕ ಬಿಜೆಪಿ ಪಕ್ಷದ ಉಸಿರುಗಟ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಡಾ. ಮಂಜುನಾಥ್ ಅಭ್ಯರ್ಥಿ ಮಾಡಲು ಯೋಗೇಶ್ವರ್ ಶ್ರಮವಹಿಸಿದ್ರು. ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ರನ್ನೇ ಬಲಿ ಪಡೆದಿದ್ದಾರೆ. ತಮ್ಮ ಕುಟುಂಬದವರನ್ನ ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರ ಬಲಿ ಪಡೆಯುತ್ತಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ. ನಿಖಿಲ್ ಅಲ್ಲ ಕುಮಾರಸ್ವಾಮಿ ನಿಂತರೂ ಏನು ಮಾಡಲಾಗಲ್ಲ. ಯೋಗೇಶ್ವರ್ ಆಚೆ ಕಳುಹಿಸಲು ವಿಜಯೇಂದ್ರ, ಯಡಿಯೂರಪ್ಪ ಕಾರಣ. ಬಿಜೆಪಿ ಪಕ್ಷದ ಗುಂಪುಗಾರಿಕೆಯಿಂದ ಯೋಗೇಶ್ವರ್ ಆಚೆ ಹೋದರು. ಪಾಪ ಈಗ ನಿಖಿಲ್‌ನನ್ನ ಚುನಾವಣಾ ಆಹುತಿ ಮಾಡ್ತಿದ್ದಾರೆ ಎಂದು ಕುಮಾರಸ್ವಾಮಿ ಕುಟುಂಬದ ವಿರುದ್ಧ ಕಿಡಿಕಾರಿದರು.
ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿ ಲಾಟರಿಯಲ್ಲಿ ಸಿಎಂ ಆದವರು. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಗಾಡಿ ನಿಂತು ಹೋಗಿತ್ತು. ಪಾಪ ಮುಳುಗುವ ಹಡಗು ಎಂದು ಮಂಡ್ಯ ಜನರ ಕೈ ಹಿಡಿದರು ಎಂದು ವ್ಯಂಗ್ಯವಾಡಿದರು. ಇನ್ನೂ ಉನ್ನತ ಹುದ್ದೆಯಲ್ಲಿದ್ದು ಕುಮಾರಸ್ವಾಮಿ ಏನು ಮಾಡ್ತಿದ್ದಾರೆ. ಮಂಡ್ಯದಲ್ಲಿ ನಾಲ್ಕು ದಿನ ಬೆಂಗಳೂರಲ್ಲಿ ನಾಲ್ಕು ದಿನ ಇರ್ತಾರೆ. ದೇಶ, ವಿದೇಶ ಸುತ್ತಿ ಬೃಹತ್ ಕೈಗಾರಿಕಾಗಳ ಸ್ಥಾಪನೆ ಮಾಡಬೇಕಿತ್ತು. ಆದರೆ ರಾಜ್ಯಕ್ಕೆ ಬಂದಾಗಲೆಲ್ಲಾ ಮುಡಾ ಕೇಸು, ಡಿಕೆಶಿ ಮುಖ ಕೆರೆಯುವ ಕೆಲಸ ಮಾಡ್ತಿದ್ದಾರೆ. ದೊಡ್ಡ ದೊಡ್ಡ ಕೈಗಾರಿಕಾ ತಂದು ಮಂಡ್ಯ ಜನರ ಋಣ ತೀರಿಸುವ ಕೆಲಸ ಕುಮಾರಸ್ವಾಮಿ ಮಾಡಬೇಕು ಎಂದು ಶಿವರಾಮೇಗೌಡ ಆಗ್ರಹಿಸಿದ್ದಾರೆ.












Click it and Unblock the Notifications