ಸುಮಲತಾ ಆಪ್ತ, ಬೇಲೂರು ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ

ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಭರ್ಜರಿಯಾಗಿ ಗೆಲುವು ಸಾಧಿಸಿದ್ದು, ಕೈ ನಾಯಕರು ಮಂಡ್ಯದಲ್ಲಿ ಬಿಜೆಪಿಗೆ ಶಾಕ್‌ ನೀಡಿದೆ.

ಮಾಜಿ ಸಂಸದೆ ಸುಮಲತಾ ಆಪ್ತ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಂಸದೆ ಸುಮಲತಾ ಆಪ್ತನಿಗೆ ಕಾಂಗ್ರೆಸ್‌ ಗಾಳ ಹಾಕುವಲ್ಲಿ ಯಶಸ್ವಿಯಾಗಿದ್ದು, ಮಂಡ್ಯದಲ್ಲಿ ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದೆ. ಮಾಜಿ ಸಂಸದೆ ಸುಮಲತಾ ಬೇಲೂರು ಸೋಮಶೇಖರ್ ಮಂಡ್ಯ ಶಾಸಕ ಗಣಿಗ ರವಿಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Former MP Sumalatha Close Aide Belur Somashekar Joins Congress

ರಾಜ್ಯದಲ್ಲಿ ಮೂರು ಪಕ್ಷಗಳು ಈಗಾಗಲೇ ಸ್ಥಳೀಯ ಚುನಾವಣೆಗೆ ತಯಾರಿ ನಡೆಸಿದ್ದು, ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಇನ್ನೂ ಸ್ಥಳೀಯ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಲೂರು ಸೋಮಶೇಖರ್ ಅವರಿಗೆ ಬಹುದಿನಗಳಿಂದ ಗಾಳ ಹಾಕಿತ್ತು. ಇದೀಗ ಮಂಡ್ಯ ಕಾಂಗ್ರೆಸ್‌ ನಾಯಕರ ಜೊತೆಗೆ ಮಾತುಕತೆ ನಡೆಸಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಸುಮಲತಾಗೆ ಕೈಕೊಟ್ಟು ಏಕಾಏಕಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದೆ ಸುಮಲತಾ ಆಪ್ತ ಬೇಲೂರು ಸೋಮಶೇಖರ್ ಸ್ಪರ್ಧಿಸುತ್ತಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇದೀಗ ಗ್ರೀನ್ ಸಿಗ್ನಲ್ ಸಿಕ್ಕಿದೆ ಮಂಡ್ಯ ರಾಜಕಾರಣದಲ್ಲಿ ಸಕ್ರಿಯ ವಾಗುತ್ತೇನೆ ಎಂದಿದ್ದ ಸುಮಲತಾ ಹೊಸ ವರ್ಷದ ಬಳಿಕ ರಾಜಕಾರಣದಲ್ಲಿ ಸಕ್ರಿಯಾಗುತ್ತಿದ್ದೇನೆ ಎಂದು ತಿಳಿಸಿದ್ದರು.ಆದರೆ ಇದೇ ಸಂದರ್ಭದಲ್ಲಿ ಸುಮಲತಾಗೆ ಕೈಕೊಟ್ಟು ಇದೀಗ ಬೇಲೂರು ಸೋಮಶೇಖರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಮಂಡ್ಯದಲ್ಲಿ ಸಹಜವಾಗಿ ಮೈತ್ರಿ ಪಕ್ಷಗಳಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+