• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮರಿಗೆ ಕೊವಿಡ್-19

|

ಬೆಂಗಳೂರು, ಮಾರ್ಚ್ 31: ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಮತ್ತು ಅವರ ಧರ್ಮಪತ್ನಿ ಚೆನ್ನಮ್ಮ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರುಮುಖಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರುಮುಖ

"ನನಗೆ ಹಾಗೂ ನನ್ನ ಪತ್ನಿ ಚೆನ್ನಮ್ಮ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಉಳಿದ ಕುಟುಂಬ ಸದಸ್ಯರಿಂದ ನಾವು ಅಂತರ ಕಾಯ್ದುಕೊಂಡಿದ್ದು, ಪ್ರತ್ಯೇಕವಾಗಿದ್ದೇವೆ" ಎಂದು ಹೆಚ್ ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.

"ಕಳೆದ ಕೆಲವು ದಿನಗಳಿಂದ ನಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ತೆರಳಿ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು. ನಮ್ಮ ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಿಲ್ಲ" ಎಂದು ಹೆಚ್ ಡಿ ದೇವೇಗೌಡರು ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್:

"ಹಿರಿಯರು, ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

   ಕೊರೊನಾ ಸಂಕಷ್ಟಕ್ಕೆ ಬೇಸತ್ತು ಕ್ಯಾಬ್‌ ಚಾಲಕ ಆತ್ಮಹತ್ಯೆ ಯತ್ನ! ಚಾಲಕನ ಸ್ಥಿತಿ ಗಂಭೀರ | Oneindia Kannada

   ದೇವೇಗೌಡರ ಆರೋಗ್ಯ ವಿಚಾರಿಸಿದ ಮೋದಿ:

   ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರ ಜೊತೆಗೆ ಮಾತನಾಡಿದ್ದು, ಅವರು ಮತ್ತು ಅವರ ಧರ್ಮಪತ್ನಿಯವರ ಆರೋಗ್ಯದ ವಿಚಾರಿಸಿದ್ದೇನೆ. ಶೀಘ್ರದಲ್ಲೇ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.


   ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ದೇವೇಗೌಡರು:
   "ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅನಾರೋಗ್ಯದ ಬಳಿಕ ಅವರು ನನಗೆ ಕರೆ ಮಾಡಿ ವಿಚಾರಿಸಿದರು. ದೇಶದ ಯಾವುದೇ ನಗರದ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುವಂತೆ ಸೂಚಿಸಿದ ಅವರ ಪ್ರಸ್ತಾಪದಿಂದ ನಾನು ಪ್ರಭಾವಿತನಾಗಿದ್ದೇನೆ. ಬೆಂಗಳೂರಿನಲ್ಲೇ ನನ್ನನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತದೆ ಎಂದು ಅವರಿಗೆ ತಿಳಿಸಿದ್ದೇನೆ" ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.

   English summary
   Former PM And JD(S) Leader HD Devegowda And His Wife Chennamma Test Positive For COVID-19
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X