ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ದೇವೇಗೌಡ ಕಿಡಿ

|
Google Oneindia Kannada News

ಬೆಂಗಳೂರು, ನವೆಂಬರ್ 27: ನೂತನ ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ರೈತರು 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದು, ಪೊಲೀಸರ ಮತ್ತು ರೈತರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಪ್ರತಿಭಟನೆಗೆ ತೆರಳುತ್ತಿರುವ ರೈತರನ್ನು ಅಡ್ಡಗಟ್ಟಿ ಅವರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯುಗಳನ್ನು ಬಳಸುತ್ತಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರೈತರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡದ ಇರುವುದನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಖಂಡಿಸಿದ್ದಾರೆ.

ರೈತರನ್ನು ಘನತೆಯಿಂದ ನಡೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿರುವ ದೇವೇಗೌಡ, ಪೊಲೀಸ್ ಬಲದಿಂದ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ರೈತರ ಮೇಲೆ ಮಧ್ಯರಾತ್ರಿಯೂ ಜಲಫಿರಂಗಿ ಬಳಸಿದ ಪೊಲೀಸರುರೈತರ ಮೇಲೆ ಮಧ್ಯರಾತ್ರಿಯೂ ಜಲಫಿರಂಗಿ ಬಳಸಿದ ಪೊಲೀಸರು

'ದೆಹಲಿ ಸಮೀಪ ರೈತರೊಂದಿನ ಮುಖಾಮುಖಿ ಸಂಘರ್ಷದ ಚಿತ್ರಗಳನ್ನು ಕಂಡು ನನಗೆ ಅತೀವ ಯಾತನೆಯಾಗಿದೆ. ರೈತರನ್ನು ಘನತೆಯಿಂದ ನಡೆಸಿಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ. ದಯವಿಟ್ಟು ಅವರೊಂದಿಗೆ ಮಾತನಾಡಿ. ಅವರ ಮಾತುಗಳನ್ನು ಕೇಳಿ. ಪೊಲೀಸ್ ಶಕ್ತಿಯು ಅವರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ' ಎಂದು ದೇವೇಗೌಡ ಟ್ವೀಟ್ ಮಾಡಿದ್ದಾರೆ.

Former PM HD Deve Gowda Asks Centre To Treat Farmers With Dignity

Recommended Video

ವಿಜಯಪುರದಲ್ಲಿ Basavana Gowda Yatnal ಬೆಂಬಲಿಗರಿಗೆ ಕರವೇ ಕಾರ್ಯಕರ್ತನ ಉತ್ತರ

ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣದಿಂದ ರೈತರ ಪ್ರತಿಭಟನೆಗೆ ಅವಕಾಶ ನೀಡಲಾಗುತ್ತಿಲ್ಲ. ರೈತರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಮುಂತಾದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಅದಕ್ಕೆ ಅನೇಕ ಮುಖಂಡರು, ಬಿಹಾರ ವಿಧಾನಸಭೆ ಚುನಾವಣೆ ವೇಳೆ ರಾಜಕಾರಣಿಗಳು ಈ ನಿಯಮಗಳನ್ನು ಪಾಲಿಸಿದ್ದರೇ? ಅವರಿಗೆ ನಿಯಮಗಳು ಅನ್ವಯವಾಗುವುದಿಲ್ಲವಾದರೆ, ರೈತರಿಗೇಕೆ? ಪ್ರತಿಭಟನೆ ನಡೆಸಿ ರೈತರು ತಮ್ಮ ನೋವು ಹೇಳಿಕೊಳ್ಳಲು ಅವಕಾಶ ನೀಡಿ ಎಂದು ಆಗ್ರಹಿಸಿದ್ದಾರೆ.

English summary
Farmers Delhi Chalo protest: Former Prime Minister HD Deve Gowda asked the Union government to treat farmers with dignity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X