HD Deve Gowda: ಹೆಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ದಿಢೀರ್‌ ಏರುಪೇರು, ಆಸ್ಪತ್ರೆಗೆ ದಾಖಲು!

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹಾಗೂ ಹಾಲಿ ರಾಜ್ಯಸಭೆ ಸದಸ್ಯರಾದ ಹೆಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ದಿಢೀರ್‌ ಏರುಪೇರು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ದೇವೇಗೌಡ ಅವರನ್ನು ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

92 ವರ್ಷ ವಯಸ್ಸಿನವರಾದ ದೇವೇಗೌಡರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಇಳಿ ವಯಸ್ಸಿನಲ್ಲೂ ಅವರು ಜೆಡಿಎಸ್‌ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಪಕ್ಷ ಸಂಘಟನೆಗಾಗಿ ರಾಜ್ಯದ ವಿವಿಧೆಡೆ ಪ್ರವಾಸ ಮಾಡಿಯೂ ದಣಿದಿದ್ದರು. ಇದರ ನಡುವೆ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Former PM HD Deve Gowda Hospitalized In Bengaluru After Sudden Health Deterioration

ಕಳೆದ ವರ್ಷವೂ ಅವರು ತೀವ್ರ ಅನಾರೋಗ್ಯದಿಂದ, ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆರೋಗ್ಯ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದರು. ಸದ್ಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಹಾಗಾಗಿ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ದೇವೇಗೌಡರ ಕುಟುಂಬದವರು ಹಾಗೂ ಮಣಿಪಾಲ್‌ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಸದ್ಯದಲ್ಲೇ ಸಿಗುವ ಸಾಧ್ಯತೆ ಇದೆ.

ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ದೇವೇಗೌಡರು, ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಜಿಡಿಎಸ್‌ ಮಹಿಳಾ ಘಟಕದ ಸಮಾವೇಶವನ್ನು ಆಯೋಜಿಸುವುದಾಗಿ ಹೇಳಿದ್ದರು. ಮಹಿಳಾ ಸಮಾವೇಶದಲ್ಲಿ 60,000 ಜನರನ್ನ ಸೇರಿಸಲಾಗುತ್ತದೆ. ಇದರಿಂದ ಬೆಂಗಳೂರು ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಅನುಕೂಲವಾಗಲಿದೆ ಎಂದಿದ್ದರು. ಜಿಬಿಎಗೆ ನಡೆಯುವ ಚುನಾವಣೆಯಲ್ಲ ನಮ್ಮ ಪಕ್ಷ 60 ಸ್ಥಾನಗಳನ್ನು ಗೆಲ್ಲುವ ಗುರಿ ಇದೆ. ನಿಖಿಲ್‌ ಕುಮಾರಸ್ವಾಮಿ ನಡೆಸಿದ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿದ್ದರೂ ನಮ್ಮ ಶಕ್ತಿ ಎಷ್ಟಿದೆ ಎಂಬುದನ್ನ ತೋರಿಸಬೇಕು ಎಂದು ತೊಡೆತಟ್ಟಿದ್ದರು.

ನಾಳೆ ಡಿಸ್ಚಾರ್ಜ್‌ ಸಾಧ್ಯತೆ

ದೇವೇಗೌಡರು ಈಗ ಆರಾಮಾಗಿದ್ದಾರೆ. ಆತಂಕ ಪಡಬೇಕಿಲ್ಲ ಎಂದು ಜೆಡಿಎಸ್‌ ಪಕ್ಷದ ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸೋಮವಾರ ರಾತ್ರಿಯೇ ಅವರನ್ನು ದಾಖಲಿಸಲಾಗಿದ್ದು, ದೇವೇಗೌಡರು ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್‌ನಿಂದ ದೇವೇಗೌಡರು ಬಳಲುತ್ತಿದ್ದು, ಮಣಿಪಾಲ್‌ ಆಸ್ಪತ್ರೆಯ ಡಾ.ಸುದರ್ಶನ್ ಬಲ್ಲಾಳ್ ಅವರಿಂದ ದೇವೇಗೌಡರಿಗೆ ಚಿಕಿತ್ಸೆ ನಡೆಯುತ್ತಿದೆ. ಮಣಿಪಾಲ್ ಆಸ್ಪತ್ರೆಗೆ ಈಗಾಗಲೇ ದೇವೇಗೌಡರ ಪುತ್ರ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗಮಿಸಿ, ಆರೋಗ್ಯ ವಿಚಾರಿಸಿದ್ದಾರೆ. ನಾಳೆ ಅವರನ್ನು ವಾರ್ಡ್‌ಗೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+