ಕುಮಾರಸ್ವಾಮಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ದೇವೇಗೌಡರು

ಬೆಂಗಳೂರು, ಡಿಸೆಂಬರ್ 16 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕುಮಾರಸ್ವಾಮಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.

ಎಚ್.ಡಿ.ದೇವೇಗೌಡ ಅವರು @H_D_Devegowda ಟ್ವಿಟರ್ ಖಾತೆಯಿಂದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಡಿಸೆಂಬರ್ 16ರ ಭಾನುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ. ಡಿಸೆಂಬರ್ 16, 1959ರಲ್ಲಿ ಜನಿಸಿದ ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

Former PM HD Deve Gowda wishes HD Kumaraswamy on his birthday

ರಾಜ್ಯದ ಮುಖ್ಯಮಂತ್ರಿಗಳಾದ @hd_kumaraswamy ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಜನಪರ ಹಾಗೂ ರೈತಪರವಾಗಿರುವ ಮೈತ್ರಿ‌ ಸರ್ಕಾರವನ್ನು ಮುನ್ನಡೆಸುತ್ತಿರುವ @hd_kumaraswamy ಅವರಿಗೆ ದೇವರು ಆಯುಷ್ಯ , ಆರೋಗ್ಯ, ಶಕ್ತಿ ನೀಡುವ ಮೂಲಕ ಹೊಸ ಅಭಿವೃದ್ಧಿಯ ಪರ್ವ ಕರ್ನಾಟಕ ರಾಜ್ಯದಲ್ಲಿ ಆರಂಭವಾಗಲೆಂದು ಹಾರೈಸುತ್ತೇನೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ಜೆ.ಪಿ.ನಗರದ ನಿವಾಸದಲ್ಲಿಯೇ ಕುಮಾರಸ್ವಾಮಿ ಅವರು ಇಡೀ ದಿನವನ್ನು ಕುಟುಂಬದವರ ಜೊತೆ ಕಳೆಯಲಿದ್ದಾರೆ. ಹುಟ್ಟುಹಬ್ಬದ ದಿನ ಭೇಟಿ ಮಾಡಲು ಬರದಂತೆ ಜನರು, ಕಾರ್ಯಕರ್ತರು, ಅಭಿಮಾನಿಗಳಿಗೆ ಅವರು ಮನವಿ ಮಾಡಿದ್ದಾರೆ.

ಬೆಳಗಾವಿ ಅಧಿವೇಶನದ ಬಳಿಕ ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+