HD Devegowda Health : ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಮಂತ್ರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಣವೇಣು, ಏನು ಅವರಿಗಿದ್ದ ಸಮಸ್ಯೆ, ವೈದ್ಯರು ಹೇಳಿದ್ದೇನು? ಇಲ್ಲಿ ಸಂಪೂರ್ಣ ಮಾಹಿತಿ.
ಬೆಂಗಳೂರು, ಫೆಬ್ರವರಿ 28: ಮಾಜಿ ಪ್ರಧಾನಮಂತ್ರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಮೊಣಕಾಲು ನೋವಿನಿಂದಾಗಿ ಎಚ್.ಡಿ.ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗತ್ಯ ತಪಾಸಣೆ ನಡೆಸಿರುವ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಫಿಜಿಯೋಥೆರಪಿ ಮಾಡುತ್ತಿದ್ದಾರೆ. ದೇವೇಗೌಡರ ಮೊಣಕಾಲಿನಲ್ಲಿ ವಿಪರೀತ ನೋವು ಕಂಡು ಬಂದಿದ್ದು, ಕಾಲು ಊದಿಕೊಂಡಿತ್ತು ಎಂದು ತಿಳಿದು ಬಂದಿದೆ.

ದೇವೇಗೌಡರು ಮಂಡಿ ನೋವಿನಿಂದ ಬಳಲುತ್ತಿದ್ದರು. ಮೊಣಕಾಲು ಊದಿಕೊಂಡು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳಗ್ಗೆ ಆಸ್ಪತ್ರೆಗೆ ತೆರಳಿದ್ದಾರೆ. ಮೊದಲು ವೈದ್ಯರು ಸಾಮಾನ್ಯ ತಪಾಸಣೆ ನಡೆಸಿದ್ದಾರೆ. ನಂತರ ಫಿಜಿಯೋಥೆರಪಿ ಸಹ ನಡೆಸಿದ್ದಾರೆ. ಜೊತೆಗೆ ಒಂದು ವಾರ ದೇವೇಗೌಡರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ತಿಳಿಸಿದ್ದಾರೆ. ಹಲವು ದಿನಗಳಿಂದಲೂ ದೇವೇಗೌಡರು ಮನೆಯಲ್ಲಿ ರೆಗುಲರ್ ತಪಾಸಣೆ/ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಆಸ್ಪತ್ರೆಯಲ್ಲೇ 7 ದಿನ ವಿಶ್ರಾಂತಿ
ಮನೆಯಲ್ಲೇ ಚಿಕಿತ್ಸೆ ಮಾಡುತ್ತಿದ್ದ ವೈದ್ಯರು ದೇವೇಗೌಡರಿಗೆ ಮೊಣಕಾಲಿನ ನೋವು ಜಾಸ್ತಿ ಆಗಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಶಿಫಾರಸು ಮಾಡಿದರು. ಅದರಂತೆ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವಿಷಯ ಗೊತ್ತಾಗುತ್ತಿದ್ದಂತೆ ದೇವೇಗೌಡರ ಕುಟುಂಬಸ್ಥರು ಮಣಿಪಾಲ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸದ್ಯ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿದೆ. ಆತಂಕ ಪಡುವ ಅವಶ್ಯಕತೆ ಇಲ್ಲ. ದೇವೇಡೌಡರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೆರೆಗೆ ಒಂದು ವಾರ ಕಾಲ ದೇವೇಗೌಡರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವುದಾಗಿ ಮೂಲಗಳು ತಿಳಿಸಿವೆ. ಮನೆಯಲ್ಲಿ ಕಾರ್ಯಕರ್ತರು ಸೇರಿದಂತೆ ನಿತ್ಯ ನೂರಾರು ಮಂದಿ ಬರುತ್ತಾರೆ. ಹೀಗಾಗಿ ಅವರು ಆಸ್ಪತ್ರೆಯಲ್ಲೇ ಹೆಚ್ಚಿನ ಚಿಕಿತ್ಸೆ ಪಡೆಯಲು ಒಪ್ಪಿದ್ದಾರೆ.












Click it and Unblock the Notifications