ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ; ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 3: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿರುವುದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ತಿಳಿಸಿದೆ.

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಮತ್ತು ಅವರ ಧರ್ಮಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಮಾರ್ಚ್ 31ರಂದು ದೃಢಪಟ್ಟಿದ್ದು, ಆನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮರಿಗೆ ಕೊವಿಡ್-19ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಪತ್ನಿ ಚೆನ್ನಮ್ಮರಿಗೆ ಕೊವಿಡ್-19

ಶುಕ್ರವಾರ ದೇವೇಗೌಡರ ಆರೋಗ್ಯದ ಕುರಿತು ಆಸ್ಪತ್ರೆ ಹೇಳಿಕೆ ನೀಡಿದ್ದು, "ಎಚ್‌.ಡಿ. ದೇವೇಗೌಡ ಅವರ ಆರೋಗ್ಯ ಸ್ಥಿತಿ ನಿರಾತಂಕವಾಗಿದೆ. ಅವರು ಚೇತರಿಕೆಯಾಗಿದ್ದಾರೆ. ಜ್ವರ ಇಲ್ಲ. ಸೋಮವಾರದ ಹೊತ್ತಿಗೆ ಅವರನ್ನು ಬಿಡುಗಡೆಗೊಳಿಸುವ ಸಾಧ್ಯತೆಯಿದೆ" ಎಂದು ತಿಳಿಸಿದೆ.

Former PM HD Devegowda Expected To Discharge Soon

ಕೊರೊನಾ ಕಾಣಿಸಿಕೊಳ್ಳುತ್ತಿದ್ದಂತೆ ಬುಧವಾರ ದೇವೇಗೌಡ ಅವರು ಟ್ವೀಟ್ ಮಾಡಿದ್ದು, "ನನಗೆ ಹಾಗೂ ನನ್ನ ಪತ್ನಿ ಚೆನ್ನಮ್ಮ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಉಳಿದ ಕುಟುಂಬ ಸದಸ್ಯರಿಂದ ನಾವು ಅಂತರ ಕಾಯ್ದುಕೊಂಡಿದ್ದು, ಪ್ರತ್ಯೇಕವಾಗಿದ್ದೇವೆ" ಎಂದಿದ್ದರು.

Recommended Video

'ಟಫ್ ರೂಲ್ಸ್ ನಲ್ಲಿ ಯಾವುದೇ ಬದಲಾವಣೆ ಇಲ್ಲ'-ಆರೋಗ್ಯ ಸಚಿವ ಡಾ.ಕೆ ಸುಧಾಕರ್ | Oneindia Kannada

"ಕಳೆದ ಕೆಲವು ದಿನಗಳಿಂದ ನಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ತೆರಳಿ ಕೊರೊನಾ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು. ನಮ್ಮ ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಿಲ್ಲ" ಎಂದು ಮನವಿ ಮಾಡಿಕೊಂಡಿದ್ದರು. ಆನಂತರ ಹಲವು ರಾಜಕೀಯ ನಾಯಕರು ಅವರ ಆರೋಗ್ಯ ಸುಧಾರಣೆಗೆ ಹಾರೈಸಿದ್ದರು. ಪ್ರಧಾನಿ ಮೋದಿ ಅವರು ಕರೆ ಮಾಡಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದರು.

English summary
Former Prime Minister HD Devegowda has been recovering and expected to discharge soon, informed Manipal Hospital,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X