Prajwal Revanna: ಪ್ರಜ್ವಲ್ ರೇವಣ್ಣ ಉಚ್ಛಾಟನೆ, ಮಾಜಿ ಪ್ರಧಾನಿ ದೇವೇಗೌಡರಿಂದ ಮಹತ್ವದ ಆದೇಶ!
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು, ಅಂತಾ ಆರೋಪ ಮಾಡಿದ್ದ ಸಾವಿರಾರು ಅಶ್ಲೀಲ ವಿಡಿಯೋ ವೈರಲ್ ಆಗಿದ್ದವು. ಈ ಹಿನ್ನೆಲೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೀಗ, ಸ್ವತಃ ತಮ್ಮ ಮೊಮ್ಮಗನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಆದೇಶಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದು, ಹಾಸನದಲ್ಲಿ ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಹಾದಿ ಬೀದಿಯಲ್ಲಿ ಸಿಕ್ಕಿದ್ದವು. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್ ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನ ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು. ಈ ವಿಚಾರ ಜೆಡಿಎಸ್ ಪಕ್ಷದ ವರಿಷ್ಠರಿಗೆ ಭಯ ಮೂಡಿಸಿತ್ತು.

ಶಾಸಕರ ಭಯಕ್ಕೆ ಉಚ್ಛಾಟನೆ ಮಾಡಿದ್ರಾ?
ಈಗಾಗಲೇ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ ಆಡುತ್ತಿದ್ದು, ಇದೇ ಪರಿಸ್ಥಿತಿಗೆ ಸಿಲುಕಿ ಜೆಡಿಎಸ್ ಶಾಸಕರು ಪಕ್ಷವನ್ನೇ ಬಿಟ್ಟು ಹೋಗುವ ಸಾಧ್ಯತೆ ದಟ್ಟವಾಗಿದೆ. ಇದೇ ಕಾರಣಕ್ಕೆ ದಿಢೀರ್ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು, ಇದೀಗ ಚರ್ಚೆಗಳು ಕೂಡ ಶುರುವಾಗಿವೆ. ಆದರೆ ಪ್ರಜ್ವಲ್ ರೇವಣ್ಣ ಈಗ ಭಾರತದಲ್ಲೇ ಇಲ್ಲ, ವಿದೇಶಕ್ಕೆ ಎಸ್ಕೇಪ್ ಆಗಿದ್ದಾರೆ ಎಂಬ ಆರೋಪವನ್ನ ಕಾಂಗ್ರೆಸ್ ನಾಯಕರು ಈಗ ಮಾಡುತ್ತಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಸಂಚಲನಕ್ಕೂ ಕಾರಣವಾಗಿದೆ.
ಹಾಸನದಲ್ಲಿ ಪ್ರಜ್ವಲ್ ಗೆದ್ದರೆ ಏನು ಕಥೆ?
ಒಟ್ನಲ್ಲಿ ಪ್ರಜ್ವಲ್ ರೇವಣ್ಣ ಈಗ ದೊಡ್ಡ ಸಂಕಷ್ಟದ ಸುಳಿಗೆ ಸಿಲುಕಿದಂತೆ ಕಾಣುತ್ತಿದೆ. ಮತ್ತೊಂದು ಕಡೆ ಅಕಸ್ಮಾತ್ ಪ್ರಜ್ವಲ್ ರೇವಣ್ಣ ಈ ಬಾರಿ ಹಾಸನ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದರೆ ಏನು ಕಥೆ? ಆಗಲೂ ಪ್ರಜ್ವಲ್ ರೇವಣ್ಣ ಅವರಿಂದ ರಾಜೀನಾಮೆ ಪಡೆಯುತ್ತಾರಾ? ಎಂಬ ಪ್ರಶ್ನೆ ಕೂಡ ಮೂಡಿದೆ. ಮತ್ತೊಂದು ಕಡೆ ಪ್ರಜ್ವಲ್ ರೇವಣ್ಣ ವಿಚಾರ ಈಗ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ. ಹಾಗೂ, ಕಾಂಗ್ರೆಸ್ ನಾಯಕರು ಇದೇ ವಿಚಾರ ಹಿಡಿದು ಪ್ರಧಾನಿ ಮೋದಿ ಅವರಿಗೆ ಪ್ರಶ್ನೆಯನ್ನು ಕೇಳುತ್ತಿದ್ದಾರೆ.












Click it and Unblock the Notifications