Manmohan Singh: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಲ್ಲಿ....
ಭಾರತದ ಆರ್ಥಿಕತೆಯ ಸುಧಾರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಭಾರತ ಕಂಡ ಅತ್ಯಂತ ಶ್ರೇಷ್ಠ ಆಡಳಿತಗಾರ ಎಂಬ ಬಿರುದು ಕೂಡ ಪಡೆದಿದ್ದರು. ಆಧುನಿಕ ಭಾರತದ ಅಭಿವೃದ್ಧಿಗೆ ಮೂಲವಾದ ಖಾಸಗೀಕರಣ, ಉದಾರೀಕರಣ & ಜಾಗತೀಕರಣಕ್ಕೆ ಚಾಲನೆ ನೀಡಿದ್ದೇ ಮನಮೋಹನ್ ಸಿಂಗ್ ಅವರು.
ಹೀಗೆ 1992 ಸಮಯಕ್ಕೇ ಭಾರತ ಆರ್ಥಿಕತೆಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು ಮನಮೋಹನ್ ಸಿಂಗ್ ಅವರು. ಭಾರತೀಯರ ಅಭಿವೃದ್ಧಿಗೆ ಶ್ರಮಿಸಿದ್ದ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014ರ ತನಕ ಭಾರತದ ಪ್ರಧಾನಿಯಾಗಿ ಕೂಡ ಕೆಲಸ ಮಾಡಿ ಸಾಕಷ್ಟು ಸುಧಾರಣೆ ತಂದಿದ್ದರು. ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್‌ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಹೀಗಿದ್ದಾಗಲೇ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಲ್ಲಿ....

ಮನಮೋಹನ್ ಸಿಂಗ್ ಅವರಿಗೆ ಏನಾಗಿತ್ತು?
ಭಾರತ ಕಂಡ ಶ್ರೇಷ್ಠ ನಾಯಕರ ಸಾಲಿಗೆ ಮನಮೋಹನ್ ಸಿಂಗ್ ಅವರು ಕೂಡ ಸೇರಿದ್ದು, ವಯೋ ಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಹಾಗೇ, ಮನಮೋಹನ್ ಸಿಂಗ್ ಅವರಿಗೆ ಸೂಕ್ತ ಚಿಕಿತ್ಸೆಯನ್ನು ಕೂಡ ನೀಡಲಾಗುತ್ತಿತ್ತು. ಆದರೆ ದಿಢೀರ್ ಇಂತಹ ಬೆಳವಣಿಗೆ ನಡೆದು ಹೋಗಿದೆ. ಮನಮೋಹನ್ ಸಿಂಗ್ ಅವರು ಇಂದು ಸಂಜೆ ದಿಢೀರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲಿ ಸಾಕಷ್ಟು ಆತಂಕ ನಿರ್ಮಾಣ ಆಗಿತ್ತು.
ತುರ್ತುನಿಗಾ ಘಟಕದಲ್ಲಿ ಸಂಜೆಯಿಂದಲೂ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆಯನ್ನು ನೀಡಲಾಗಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಿಸದೆ ಮನಮೋಹನ್ ಸಿಂಗ್ ಅವರು ಕೆಲ ನಿಮಿಷಗಳ ಹಿಂದೆ ಕೊನೆಯುಸಿರು ಎಳೆದಿರುವ ಮಾಹಿತಿ ಹೊರಬಿದ್ದಿದೆ. ಈ ಸುದ್ದಿ ಇದೀಗ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಯಾಕಂದ್ರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾಗತಿಕ ಆರ್ಥಿಕತೆ ಸುಧಾರಣೆಯಲ್ಲಿ ಕೂಡ ಭಾರಿ ದೊಡ್ಡ ಪಾತ್ರವನ್ನು ವಹಿಸಿದ್ದರು.
ಸತತ 10 ವರ್ಷ ಪ್ರಧಾನಿಯಾಗಿದ್ದರು
2004 ರಿಂದ 2014ರ ತನಕ ಭಾರತದ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಇಡೀ ಜಗತ್ತು ಕಂಡ ಅತ್ಯುತ್ತಮ ನಾಯಕರ ಪೈಕಿ ಒಬ್ಬರು ಎನ್ನಬಹುದು. ಆರ್ಥಿಕ ತಜ್ಞರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತ ಅಡಳಿತ ವ್ಯವಸ್ಥೆಯಲ್ಲಿ ಭಾರಿ ದೊಡ್ಡ ಬದಲಾವಣೆ ತಂದ ಅಧಿಕಾರಿ ಕೂಡ ಆಗಿದ್ದರು. ಈ ರೀತಿ ಮನಮೋಹನ್ ಸಿಂಗ್ ಅವರು ಅಧಿಕಾರಿಯಾಗಿ, ಭಾರತದ ಆಡಳಿತ ಸುಧಾರಣೆ ಮಾಡಿ ನಂತರ ಸತತ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿಯೂ ಆಡಳಿತ ನಡೆಸಿದರು.
ಒಟ್ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸುನೀಗಿರುವ ಸುದ್ದಿ ಪ್ರಪಂಚದ ಹಲವು ದೇಶಗಳಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಹಾಗೇ ಜಗತ್ತು ಕಂಡ ಅತ್ಯುತ್ತಮ ಆರ್ಥಿಕ ತಜ್ಞರ ಪೈಕಿ ಒಬ್ಬರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಗಲಿಕೆ, ಇದೀಗ ಭಾರಿ ದೊಡ್ಡ ನಷ್ಟವನ್ನೂ ಉಂಟುಮಾಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications