ಪ್ರಣಬ್ ಮುಖರ್ಜಿ ಆದರ್ಶ ಎಲ್ಲರಿಗೂ ಮಾದರಿ: ಎಚ್ಡಿಕೆ ಸಂತಾಪ
ಬೆಂಗಳೂರು, ಆ 31: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು (ಆಗಸ್ಟ್ 31) ನಿಧನರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು.
Recommended Video
ಪ್ರಣಬ್ ನಿಧನಕ್ಕೆ ಪ್ರಧಾನಿ ಮೋದಿ ಆದಿಯಾಗಿ ನಾಡಿನ ಗಣ್ಯರು ಕಂಬಿನಿ ಮಿಡಿದಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, "ಪ್ರಣಬ್ ಅವರ ಆದರ್ಶ ಎಲ್ಲರಿಗೂ ಮಾದರಿ" ಎಂದಿದ್ದಾರೆ.
ಮಾಜಿ ರಾಷ್ಟ್ರಪತಿಗಳ ನಿಧನಕ್ಕೆ ಎಚ್ಡಿಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. "ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸುತ್ತಿದ್ದೇನೆ. ಇಂತಹ ಮಹಾನ್ ಚೇತನದ ಅಗಲಿಕೆಯಿಂದ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ".

"ಸೌಮ್ಯ ವ್ಯಕ್ತಿತ್ವದ ಪ್ರಣಬ್ ಮುಖರ್ಜಿ ಅವರು ಈ ದೇಶ ಕಂಡ ಅಪರೂಪದ ರಾಜಕಾರಣಿ. ಪಕ್ಷಾತೀತವಾಗಿ ಎಲ್ಲರ ಪ್ರೀತಿಗೆ ಭಾಜನರಾಗಿದ್ದ ಅವರ ರಾಜಕೀಯ ಆದರ್ಶ ಎಲ್ಲರಿಗೂ ಮಾದರಿಯಾಗಿತ್ತು".
"ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
"ಆರ್ ಆರ್ ಆಸ್ಪತ್ರೆಯ ನುರಿತ ವೈದ್ಯರ ಸತತ ಪ್ರಯತ್ನದ ನಡುವೆ ಚಿಕಿತ್ಸೆ ಫಲಕಾರಿಯಾಗದೆ ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಕೊನೆಯುಸಿರೆಳೆದಿದ್ದಾರೆ" ಎಂದು ಪ್ರಣಬ್ ಮುಖರ್ಜಿ ಪುತ್ರ ಟ್ವೀಟ್ ಮಾಡಿದ್ದರು.












Click it and Unblock the Notifications