ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಬಿಜೆಪಿಗೆ ಸೇರ್ಪಡೆ?

|
Google Oneindia Kannada News

ಬೆಂಗಳೂರು, ಏ.3: ಸರ್ಕಾರದ ನಿವೃತ್ತ ಕಾರ್ಯದರ್ಶಿ ಕೆ ರತ್ನಪ್ರಭಾ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನವು ಸುದ್ದಿಗಳು ಹರಿದಾಡುತ್ತಿವೆ.

ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಸ್ವತಃ ಬಿಜೆಪಿಯ ಕಲಬುರ್ಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ಅವರು ಮಾಹಿತಿ ನೀಡಿದ್ದು, ಕಲಬುರ್ಗಿಯಲ್ಲಿ ಉಮೇಶ್ ಜಾಧವ್ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ರತ್ನಪ್ರಭಾ ಅವರನ್ನು ಅಭ್ಯರ್ಥಿಯಾಗಿ ಮಾಡಿದರೆ ದಲಿತ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತರ ಮತಗಳು ಸಹ ಬಿಜೆಪಿಗೆ ಬರುತ್ತದೆ ಎನ್ನುವುದು ಬಿಜೆಪಿಯ ಕಲ್ಪನೆಯಾಗಿದೆ.

Former state chief secretary k Ratnaprabha to join BJP

ಇಂದು ಕಲಬುರ್ಗಿಯಲ್ಲಿ ಬೃಹತ್ ಮೆರವಣಿಗೆ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಜಾಧವ್ ಅವರು, ಮೆರವಣಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ಅಂತೆಯೇ ಇದೇ ಸಂದರ್ಭದಲ್ಲಿ ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಜಾಧವ್ ಮಾಹಿತಿ ನೀಡಿದ್ದಾರೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಬಿಜೆಪಿಗೆ, ಖರ್ಗೆ ವಿರುದ್ಧ ಸ್ಪರ್ಧೆ? ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಬಿಜೆಪಿಗೆ, ಖರ್ಗೆ ವಿರುದ್ಧ ಸ್ಪರ್ಧೆ?

ರತ್ನಪ್ರಭಾ ಯಾರು:ಹೈದರಾಬಾದ್ ಮೂಲದ ರತ್ನಪ್ರಭಾ ಅವರು 1981ನೇ ಬ್ಯಾಚ್ ಐಎಎಸ್ ಅಧಿಕಾರಿ. ತಂದೆ ಸಿವಿಲ್ ಇಂಜಿನಿಯರ್ ಆಗಿದ್ದರು. ತಾಯಿ ವೈದ್ಯೆ. ರತ್ನಪ್ರಭಾ ಅವರ ಸಹೋದರ ಸಹ ನಾಗರಿಕಸೇವೆಯಲ್ಲಿದ್ದಾರೆ.

ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?

ರತ್ನಪ್ರಭಾ ಸರಳ ಮತ್ತು ಸಜ್ಜನಿಕೆಯ ಅಧಿಕಾರಿ : ಸಿಎಂ ಕುಮಾರಸ್ವಾಮಿ 1981ರಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ಬೀದರ್‌ನಲ್ಲಿ ರತ್ನಪ್ರಭಾ ಅವರು ಸೇವೆ ಆರಂಭಿಸಿದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

English summary
Speculations are rife in political circles that BJP is trying to get retired IAS officer and former Karnataka chief secretary K Ratna Prabha to join the party, in the backdrop of the upcoming polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X