R Narayan Death: ಮಾಜಿ ಶಾಸಕ ಆರ್. ನಾರಾಯಣ್ ಇನ್ನಿಲ್ಲ
ಬೆಂಗಳೂರು, ಡಿಸೆಂಬರ್ 12: ಕಾಂಗ್ರೆಸ್‌ನ ಮಾಜಿ ಶಾಸಕ ಆರ್ ನಾರಾಯಣ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 81 ವರ್ಷದ ಆರ್.ನಾರಾಯಣ ಅವರು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ನಾರಾಯಣ್ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ ಅವರು ಸತತವಾಗಿ ಮೂರು ಬಾರಿ ಶಾಸಕರಾಗಿದ್ದರು. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರೂ ಆಗಿದ್ದರು.
ಕೆಂಗಲ್ ಹನುಮಂತಯ್ಯ ಅವರ ಅನುಯಾಯಿಯಾಗಿ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಗೆ ಶ್ರಮಿಸಿದವರು. ತಮ್ಮ ಅಚ್ಚುಕಟ್ಟುತನದಿಂದ ಕೂಡಿದ ಕೆಲಸಕ್ಕೆ ಹೆಸರಾಗಿದ್ದವರು. ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪ್ರಮುಖ ನಾಯಕರಾಗಿದ್ದರು. ಕಾಂಗ್ರೆಸ್ ಪಕ್ಷದ ಏಳಿಗೆಗೆ ಇವರ ಕೊಡುಗೆ ಅಪಾರ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ದೂರವಾಗಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಶಾಸಕ ಜಯಣ್ಣ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಕಾಂಗ್ರೆಸ್ ಮಾಜಿ ಶಾಸಕ ಜಯಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಜಯಣ್ಣ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿಯೂ ಮಾಡಲಾಗಿತ್ತು. ಇವರನ್ನು ಚಾಮರಾಜನಗರದ ಅಜಾತಶತ್ರು ನಾಯಕ ಎಂದು ಕರೆಯಲಾಗುತ್ತಿತ್ತು. ಅತ್ಯಂತ ಸೌಮ್ಯ ಸ್ವಭಾವದ ವ್ಯಕ್ತಿ. 2023 ರ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಗೆಲುವಿಗೆ ಸಾಕಷ್ಟು ಕೊಡುಗೆ ನೀಡಿದವರು.
ಗೃಹ ಪ್ರವೇಶದ ಆಹ್ವಾನ ಪತ್ರಿಕೆ ನೀಡಲು ಹೋಗುವಾಗ ಹೃದಯಾಘಾತವಾಗಿದೆ ಎಂಬ ವಿಚಾರ ಕೇಳಿ ಬೇಸರವಾಯಿತು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ಕರುಣಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಆರ್ ನಾರಾಯಣ, ಜಯಣ್ಣ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ
ಮಾಜಿ ಶಾಸಕರಾದ ಆರ್.ನಾರಾಯಣ ಹಾಗೂ ಜಯಣ್ಣ ಎಸ್. ನಿಧನಕ್ಕೆ ಗುರುವಾರದ ಚಳಿಗಾಲದ ಅಧಿವೇಶನದಲ್ಲಿ ಸಂತಾಪ ಸೂಚಿಸಿ ನಿರ್ಣಯ ಕೈಗೊಳ್ಳಲಾಯಿತು. ಕಲಾಪದ ಆರಂಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ಸೂಚನೆ ನಿರ್ಣಯ ಮಂಡಿಸಿ, ಮಾಜಿ ಶಾಸಕ ಆರ್.ನಾರಾಯಣ ಅವರು 7 ಜುಲೈ 1943 ರಂದು ತುಮಕೂರಿನಲ್ಲಿ ಜನಿಸಿದ್ದರು. ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದಿದ್ದ ಅವರು ವಕೀಲರಾಗಿದ್ದರು.
ಬೆಳಗಾವಿ ವಿಧಾನಸಭಾ ಕ್ಷೇತ್ರದಿಂದ ಪ್ರಥಮ ಬಾರಿಗೆ 9ನೇ ವಿಧಾನಸಭೆಗೆ ಪ್ರವೇಶಿಸಿ ನಂತರ 10 ಹಾಗೂ 11ನೇ ವಿಧಾನಸಭೆಗೆ ಪುನರ ಆಯ್ಕೆಯಾದರು. ಶ್ರೀಯುತರು ಡಿ.12 ಗುರುವಾರದಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿಸಿದರು. ಮಾಜಿ ಶಾಸಕ ಹಾಗೂ ಪ್ರಸ್ತುತ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಜಯಣ್ಣ ಎಸ್ ಅವರು 9ನೇ ಸೆಪ್ಟೆಂಬರ್ 1951ರಲ್ಲಿ ಕೊಳ್ಳೆಗಾಲದಲ್ಲಿ ಜನಿಸಿದ್ದರು. ಕೃಷಿಕ ಹಾಗೂ ರೇಷ್ಮೆ ಉದ್ಯಮಿಯಾಗಿದ್ದ ಅವರು 1994ರಲ್ಲಿ 9ನೇ ವಿಧಾನಸಭೆಗೆ ಆಯ್ಕೆಗೊಂಡಿದ್ದರು. ನಂತರ 2013ರಲ್ಲಿ 14ನೇ ವಿಧಾನಸಭೆಗೆ ಪುನರ ಆಯ್ಕೆಗೊಂಡಿದ್ದರು. ಇವರು ಡಿ.10 ರಂದು ನಿಧನರಾದರು ಎಂದು ಸಭೆಗೆ ತಿಳಿಸಿದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications