ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿಗೆ ಯಡಿಯೂರಪ್ಪ ದೂರವಾಣಿ ಕರೆ: ಏನಿದು ರಾಜಕೀಯ?

|
Google Oneindia Kannada News

ಬೆಂಗಳೂರು, ನ 27: ಒಂದು ಕಾಲದ ಸಂಪುಟ ಸಹದ್ಯೋಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ, ಇನ್ನೋರ್ವ ಮಾಜಿ ಸಿಎಂ ಯಡಿಯೂರಪ್ಪನವರು ಕರೆ ಮಾಡಿ, ರಾಜಕೀಯ ಸಂಬಂಧ ಚರ್ಚೆ ನಡೆಸಿದ್ದಾರೆ.

25 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಯಡಿಯೂರಪ್ಪನವರ ಕರೆ ಕುತೂಹಲ ಮೂಡಿಸಿದೆ. ತಮ್ಮ ಆಪ್ತರಿಗೆ ಪರಿಷತ್ ಟಿಕೆಟ್ ಕೊಡಿಸುವಲ್ಲಿ ಹೆಚ್ಚುಕಮ್ಮಿ ಯಡಿಯೂರಪ್ಪ ಯಶಸ್ವಿಯಾದ ನಂತರ, ಅವರನ್ನೆಲ್ಲಾ ಗೆಲ್ಲಿಸಿಕೊಂದು ಬರುವ ಜವಾಬ್ದಾರಿ ಬಿಎಸ್ವೈ ಮೇಲಿದೆ.

ದೇವೇಗೌಡ್ರು ರಾಜಕೀಯ ಉತ್ತುಂಗಕ್ಕೇರಿದ ಹಿಂದಿನ ಶಕ್ತಿಯ ಬಗ್ಗೆ ಎಚ್‌ಡಿಕೆ ವಿವರಣೆದೇವೇಗೌಡ್ರು ರಾಜಕೀಯ ಉತ್ತುಂಗಕ್ಕೇರಿದ ಹಿಂದಿನ ಶಕ್ತಿಯ ಬಗ್ಗೆ ಎಚ್‌ಡಿಕೆ ವಿವರಣೆ

ಈ ಹಿನ್ನಲೆಯಲ್ಲಿ, ಯಡಿಯೂರಪ್ಪನವರು ಕುಮಾರಸ್ವಾಮಿಯವರಿಗೆ ಕರೆಯನ್ನು ಮಾಡಿ, ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿ ಇಲ್ಲವೋ, ಅಲ್ಲೆಲ್ಲಾ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಜೆಡಿಎಸ್ ಆರು ಕ್ಷೇತ್ರದಲ್ಲಿ ಸ್ಪ್ರರ್ಧೆ ಮಾಡುತ್ತಿದೆ.

ಈ ಬಗ್ಗೆ ಮಾತನಾಡಿರುವ ಕುಮಾರಸ್ವಾಮಿ,"ಯಡಿಯೂರಪ್ಪನವರು ಕರೆ ಮಾಡಿ ಬೆಂಬಲ ಕೇಳಿದ್ದಾರೆ. ಅದನ್ನು ಬಹಿರಂಗ ಪಡಿಸುವ ಮೂಲಕ ಸುಸಂಸ್ಕೃತ ರಾಜಕೀಯವನ್ನು ಮಾಡಿದ್ದಾರೆ" ಎಂದು ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್ಸಿನವರು ಜೆಡಿಎಸ್ ಅನ್ನು ಟೀಕಿಸಿದ್ದಕ್ಕೆ ಕುಮಾರಸ್ವಾಮಿ ನೀಡಿದ ಪ್ರತಿಕ್ರಿಯೆ ಹೀಗಿದೆ:

 'ಪ್ರತಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ನಾಯಕರಿಗೆ ಜೆಡಿಎಸ್‌ ಜ್ವರ' 'ಪ್ರತಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ನಾಯಕರಿಗೆ ಜೆಡಿಎಸ್‌ ಜ್ವರ'

 ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಬೆಂಬಲ

ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಬೆಂಬಲ

"ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿರುವುದು ಸರಿಯಷ್ಟೇ. ಈ ಬಗ್ಗೆ ನಾನು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿ ನಮ್ಮ ಪಕ್ಷದ ಅಭಿಪ್ರಾಯ ಹೇಳಿದ್ದೇನೆ. ಆದರೆ, ಆ ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ" ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಎಲ್ಲೂ ನಾನು ಹೇಳಿಲ್ಲ

"ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಎಲ್ಲೂ ನಾನು ಹೇಳಿಲ್ಲ. ಆದರೆ ಬೆಂಬಲ ಕೇಳಿದ ಯಡಿಯೂರಪ್ಪ ಅವರ ಬಗ್ಗೆ ರಾಜಕೀಯವನ್ನು ಹೊರತುಪಡಿಸಿ ಒಂದೆರಡು ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಅವರ ರಾಜಕೀಯ ಅನುಭವ, ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ. ಇದರಲ್ಲಿ ತಪ್ಪೇನಿದೆ?" ಎಂದು ಕುಮಾರಸ್ವಾಮಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

 ಜೆಡಿಎಸ್ ಪಕ್ಷವೂ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ

ಜೆಡಿಎಸ್ ಪಕ್ಷವೂ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ

"ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದಾಕ್ಷಣ ಜೆಡಿಎಸ್ ಪಕ್ಷವೂ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ. ಚಿಕ್ಕಬಳ್ಳಾಪುರದಲ್ಲಿ ನಾನು ಕೊಟ್ಟ ಹೇಳಿಕೆಯನ್ನು ಮತ್ತೊಮ್ಮೆ ಗಮನಿಸಬೇಕು ಎಂಬುದು ನನ್ನ ಮನವಿ. ಕಾಂಗ್ರೆಸ್ ಪಕ್ಷದ ನಾಯಕರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಆ ಕಾರಣಕ್ಕೆ ಅವರು ಜನರನ್ನು, ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಪ್ರತೀ ಚುನಾವಣೆ ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತದೆ" ಎಂದು ಕುಮಾರಸ್ವಾಮಿ ತಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ.

 ಕಾಂಗ್ರೆಸ್ ಪಕ್ಷವು ಬಿಜೆಪಿಯ ಯಾವ ಟೀಮು? ಸಿ ಟೀಮಾ? ಡಿ ಟೀಮಾ?

ಕಾಂಗ್ರೆಸ್ ಪಕ್ಷವು ಬಿಜೆಪಿಯ ಯಾವ ಟೀಮು? ಸಿ ಟೀಮಾ? ಡಿ ಟೀಮಾ?

"ಕಾಂಗ್ರೆಸ್ಸಿನ ಮಂಡ್ಯ, ಕೊಡಗು ಅಭ್ಯರ್ಥಿಗಳ ಬಗ್ಗೆ ಜನರಿಗೆ ಗೊತ್ತಾಗಿದೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ಯಾರು ಕೊಡಿಸಿದರು ಎನ್ನುವುದನ್ನು ಸ್ವತಃ ಸಹಕಾರ ಸಚಿವರೇ ಹೇಳಿದ್ದಾರೆ. ಹಾಗಾದರೆ, ಕಾಂಗ್ರೆಸ್ ಪಕ್ಷವು ಬಿಜೆಪಿಯ ಯಾವ ಟೀಮು? ಸಿ ಟೀಮಾ? ಡಿ ಟೀಮಾ? ನಮ್ಮನ್ನು ಬಿಜೆಪಿ ಬಿ ಟೀಮ್ ಎನ್ನುವವರೇ ಉತ್ತರಿಸಬೇಕು" ಎಂದು ಎಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

Recommended Video

KS Bharath ಪಂದ್ಯಕ್ಕೆ ಸಿದ್ದವಾಗಿದ್ದು ಕೇವಲ 12 ನಿಮಿಷದಲ್ಲಿ | Oneindia Kannada

English summary
Former CM BS Yediyurappa Phone Call to Former CM and JDS Leader HD Kumaraswamy to discuss on Politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X