ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುವರ್ಣ ಸೌಧದ ಆವಣದಲ್ಲಿ ರಾಣಿ ಚೆನ್ನಮ್ಮ, ರಾಯಣ್ಣ, ಗಾಂಧೀಜಿ, ಅಂಬೇಡ್ಕರ್ ಪ್ರತಿಮೆಗೆ ಶಂಕುಸ್ಥಾಪನೆ

|
Google Oneindia Kannada News

ಬೆಳಗಾವಿ, ಡಿಸೆಂಬರ್ 28: ನಾಳೆ (ಡಿಸೆಂಬರ್ 29 ರಂದು) ಬೆಳಿಗ್ಗೆ 10.15 ಗಂಟೆಗೆ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾತ್ಮಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುದ್ದಲಿಪೂಜೆ ನೆರವೇರಿಸುವರು.

ಬೆಳಗಾವಿ ಸೇರಿ ಕರ್ನಾಟಕದ 865 ಹಳ್ಳಿಗಳ ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದ್ದೇವೆ: ಮಹಾರಾಷ್ಟ್ರ ಸಿಎಂಬೆಳಗಾವಿ ಸೇರಿ ಕರ್ನಾಟಕದ 865 ಹಳ್ಳಿಗಳ ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದ್ದೇವೆ: ಮಹಾರಾಷ್ಟ್ರ ಸಿಎಂ

ಕಳೆದ ವರ್ಷದ ಬೆಳಗಾವಿ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಈ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ. ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಭಯ ಸದನಗಳ ಪ್ರತಿ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಸಚಿವ ಸಂಪುಟದ ಸದಸ್ಯರು ಹಾಗೂ ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Foundation Stone for Chennamma, Rayanna, Mahatma Gandhi, And Dr.B.R.Ambedkar Statues In Suvarna Soudha

ಇನ್ನೂ ಚಳಿಗಾಲದ ಅಧಿವೇಶನ ಆರಂಭವಾದ ಮೊದಲ ದಿನ ಸುವರ್ಣ ಸೌಧದ ಅಧಿವೇಶನದ ಸಭಾಂಗಣದಲ್ಲಿ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯದೆ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಏಕಾಏಕಿ ವೀರ ಸಾವರ್ಕರ್‌ ಸೇರಿದಂತೆ ಹಲವು ಗಣ್ಯರ ಭಾವಚಿತ್ರಗಳನ್ನು ಅನಾವರಣಗೊಳಿಸಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಧೋರಣೆಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಸುವರ್ಣಸೌಧದ ಮೆಟ್ಟಿಲುಗಳ ಬಳಿ ಧರಣಿ ಹಾಗೂ ಕಲಾಪ ಸಲಹಾ ಸಮಿತಿ ಬಹಿಷ್ಕಾರದ ಮೂಲಕ ಪ್ರತಿಭಟಿಸಿತ್ತು. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಧರಣಿ ನಡೆಸಿದ ಕಾಂಗ್ರೆಸ್‌ ಶಾಸಕರು, ವೀರ್ ಸಾವರ್ಕರ್‌ ಸೇರಿದಂತೆ ಯಾರೊಬ್ಬರ ಫೋಟೊ ಅಳವಡಿಕೆಗೂ ನಮ್ಮ ವಿರೋಧವಿಲ್ಲ. ಆದರೆ, ಶಿಷ್ಟಾಚಾರ ಉಲ್ಲಂಘನೆ ಮಾಡಿ ಯಾವುದೇ ಚರ್ಚೆಯಿಲ್ಲದೆ ಭ್ರಷ್ಟಾಚಾರ ಹಾಗೂ ಹಗರಣಗಳಿಂದ ಗಮನ ಬೇರೆಡೆ ಸೆಳೆಯಲು ಇದನ್ನು ಬಳಸಿಕೊಳ್ಳುತ್ತಿರುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ತಿಳಿಸಿದ್ದರು.

English summary
The Foundation stone for the installation of the statues of Rani Chennamma, Krantiveera Sangolli Rayanna, Mahatma Gandhi and Dr.B.R.Ambedkar will be laid in Suvarna Soudha premises tomorrow (Thursday) at 10:15 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X