Accident News: ಎರಡು ಪ್ರತ್ಯೇಕ ಭೀಕರ ಅಪಘಾತ: ನಾಲ್ವರ ಸಾವು
Accident: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ನೆಲಮಂಗಲ, ಚಿಕ್ಕಮಗಳೂರಿನಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಚಿಕ್ಕಮಗಳೂರಿನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಒಂದನೇ ಘಟನೆ: ಬೆಂಗಳೂರು ದಕ್ಷಿಣ ಜಿಲ್ಲೆ, ಮಾಗಡಿ ತಾಲೂಕಿನ ರಸ್ತೆಪಾಳ್ಯ ಗ್ರಾಮದ ಬಳಿ ಬೈಕ್ ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೇಶವ್ (19), ಮಯೂರ್ (19)ಮೃತ ದುರ್ದೈವಿಗಳು. ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಎರಡನೇ ಪ್ರಕರಣ: ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳಿ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚನ್ನಗಿರಿ ಮೂಲದ ಕುಮಾರಪ್ಪ (60) ಮತ್ತು ಸತೀಶ್ (35) ಮೃತಪಟ್ಟವರು. ಇನ್ನೂ ಮತ್ತೊಂದು ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹೀಗೆ ಎರಡು ಪ್ರತ್ಯಕ ಅಪಘಾತದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
ಭೀಕರ ಸರಣಿ ಅಪಘಾತ: ಭೀಕರ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಬಳಿ ನಡೆದಿದೆ.
ಕಲಬುರಗಿ ತಾಲೂಕಿನ ಅವರಾದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿ ಇರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಅಂಕಲಗಿ ಮತ್ತು ಔರಾದ್ ಬಳಿ ಟ್ಯಾಂಕರ್, ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಮೃತರಲ್ಲಿ ಬೈಕ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಸಿರಡೋಣ ಗ್ರಾಮದ ನಾಗೇಂದ್ರ ಮತ್ತು ಶಿವಾನಂದ ಅಪ್ಪಾರಾವ ಸೇರಿದ್ದಾರೆ. ಸಿರಡೋಣ ಗ್ರಾಮದ ಇವರು ಕೂಲಿ ಕೆಲಸ ಮುಗಿಸಿ ಒಂದೇ ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ವಾಪಾಸ್ ಆಗುಯ್ತಿದ್ದರು. ಕಾರಿನಲ್ಲಿದ್ದ ಬಾಲ್ಕಿ ಮೂಲದ ದತ್ತಾತ್ರೇಯ ಚಿಮಾಜಿ (48), ಚಂದ್ರಕಲಾ (70) ಸಾವಿಗೀಡಾಗಿದ್ದಾರೆ. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಯಲ್ಲಿ ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ಮೈಲಾರಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ ಎನ್ನಲಾಗಿದೆ.
20 ಮಂದಿ ಸಾವು: ಬಸ್ ಹಾಗೂ ಟ್ರಕ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದರು.
ತೆಲಂಗಾಣದ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಆರ್‌ಟಿಸಿ ಬಸ್ಗೆ ಟ್ರಕ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, 24 ಜನ ಗಾಯಗೊಂಡಿದ್ದರು. ಜಲ್ಲಿಕಲ್ಲು ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅನ್ನು ಭಾರೀ ವೇಗದಲ್ಲಿ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿತ್ತು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications