ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ

|
Google Oneindia Kannada News

ಬೆಂಗಳೂರು, ಜೂ. 12 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು ನಾಲ್ಕು ಸ್ಥಾನಗಳಿಗೆ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇಬ್ಬರ ನಾಮಪತ್ರ ತಿರಸ್ಕೃತಗೊಂಡಿದ್ದು, ನಾಲ್ವರು ಅವಿರೋಧವಾಗಿ ಆಯ್ಕೆಗೊಂಡರು.

ರಾಜ್ಯಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಗುರುವಾರ ಮಧ್ಯಾಹ್ನ ಚುನಾವಣಾಧಿಕಾರಿಯಾದ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಓಂ ಪ್ರಕಾಶ್ ಅವರು, ರಾಜ್ಯಸಭೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಬಿ.ಕೆ.ಹರಿಪ್ರಸಾದ್ ಮತ್ತು ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ ಕೋರೆ ಮತ್ತು ಜೆಡಿಎಸ್ ಪಕ್ಷದ ಕುಪೇಂದ್ರ ರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿ ರಾಜ್ಯಸಭೆ ಪ್ರವೇಶಿಸಿದ್ದಾರೆ. ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿರುವುದರಿಂದ ಜೂ.19ರಂದು ಚುನಾವಣೆ ನಡೆಸುವ ಅಗತ್ಯವಿಲ್ಲ. [ರಾಜ್ಯಸಭೆಗೆ ಸದಸ್ಯರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?]

ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಎ.ಮೋಹನ್ ಮತ್ತು ಕೆ. ಪದ್ಮರಾಜನ್ ಅವರ ನಾಮಪತ್ರಗಳು ತಿರಸ್ಕೃತವಾಗಿದ್ದವು. ರಾಜ್ಯಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರಕ್ಕೆ 10 ಶಾಸಕರ ಸಹಿ ಅಗತ್ಯವಿತ್ತು. ಇಬ್ಬರ ನಾಮಪತ್ರದಲ್ಲೂ ಸಹಿ ಇರದ ಕಾರಣ ನಾಮಪತ್ರ ತಿರಸ್ಕೃತಗೊಂಡಿತ್ತು.

ಬಿಜೆಪಿಯಿಂದ ಪ್ರಭಾಕರ ಕೋರೆ

ಬಿಜೆಪಿಯಿಂದ ಪ್ರಭಾಕರ ಕೋರೆ

ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಬಿಜೆಪಿಯ ಪ್ರಭಾಕರ ಕೋರೆ ಅವರು ರಾಜ್ಯಸಭೆಗೆ ಮರು ಆಯ್ಕೆ ಬಯಸಿದ್ದರು. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ.

ಕಾಂಗ್ರೆಸ್ ನಿಂದ ಬಿ.ಕೆ.ಹರಿಪ್ರಸಾದ್

ಕಾಂಗ್ರೆಸ್ ನಿಂದ ಬಿ.ಕೆ.ಹರಿಪ್ರಸಾದ್

ಹಾಲಿ ರಾಜ್ಯಸಭೆ ಸದಸ್ಯರಾಗಿದ್ದ ಕಾಂಗ್ರೆಸ್ ಪಕ್ಷದ ಬಿ.ಕೆ.ಹರಿಪ್ರಸಾದ್ ರಾಜ್ಯಸಭೆಗೆ ಮರು ಆಯ್ಕೆ ಬಯಸಿದ್ದರು. ಸದ್ಯ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಕಾಂಗ್ರೆಸ್ ನಿಂದ ರಾಜೀವ್ ಗೌಡ

ಕಾಂಗ್ರೆಸ್ ನಿಂದ ರಾಜೀವ್ ಗೌಡ

ಐಐಎಂಬಿ ಪ್ರೊ.ರಾಜೀವ್ ಗೌಡ ಅವರು ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆ ಬಯಸಿದ್ದರು. ಅವರು ಅವಿರೋಧವಾಗಿ ಆಯ್ಕೆಯಾಗಿ ರಾಜ್ಯಸಭೆ ಪ್ರವೇಶಿಸಿದ್ದಾರೆ.

ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ

ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರು ಅವಿರೋಧವಾಗಿ ಆಯ್ಕೆಯಾಗಿ ಮೊದಲ ಬಾರಿಗೆ
ರಾಜ್ಯಸಭೆ ಪ್ರವೇಶಿಸಿದ್ದಾರೆ.

English summary
B.K. Hariprasad and Rajeev Gowda (Congress), Prabhakar Kore (BJP) and Kupendra Reddy (JDS) elected for Rajya Sabha by Karnataka. On June 12 Thrusday election officer Om Prakash declared candidates elected unopposed to the Rajya Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X