IAS: ಚುನಾವಣೆ ಹೊತ್ತಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಫೆಬ್ರವರಿ 28; ಕರ್ನಾಟಕ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಪ್ರಕಟವಾಗಲು ಕೆಲವೇ ದಿನಗಳು ಇರುವಾಗ ಈ ವರ್ಗಾವಣೆ ನಡೆದಿದೆ.
ವಿವಿಧ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಆಯುಕ್ತರು ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಲು ಕೆಲವೇ ದಿನಗಳು ಬಾಕಿ ಇದೆ. ಸರ್ಕಾರಿ ಅಧಿಕಾರಿ/ ಸಿಬ್ಬಂದಿ ವರ್ಗಾವಣೆ ಕುರಿತು ಕೇಂದ್ರ ಚುನಾವಣಾ ಆಯೋಗ ಈಗಾಗಲೇ ರಾಜ್ಯಗಳಿಗೆ ಮಾರ್ಗಸೂಚಿಯನ್ನು ನೀಡಿದೆ. ಇಂತಹ ಸಮಯದಲ್ಲಿಯೇ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
* ಡಾ. ಮಂಜುಳಾ ಎನ್. (ಕೆಎನ್: 2002). ಸರ್ಕಾರದ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ, ಮೂಲಸೌಕರ್ಯ ಇಲಾಖೆ, ಬೆಂಗಳೂರು ಹುದ್ದೆಗೆ ವರ್ಗಾವಣೆ.
* ಡಾ. ಅಜಯ್ ನಾಗಭೂಷನ್ ಎಂ. ಎನ್. (ಕೆಎನ್: 2004). ಸರ್ಕಾರದ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ (ಯುಡಿ & ಮುನ್ಸಿಪಾಲಿಟಿ), ಬೆಂಗಳೂರು. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸ್ಥಾನಕ್ಕೆ ವರ್ಗಾವಣೆ.
* ರಂದೀಪ್ ಡಿ. (ಕೆಎನ್: 2006). ಆಯುಕ್ತರು,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ, ಡಿಪಿಎಆರ್ ಇಲಾಖೆ, ಬೆಂಗಳೂರು ಸ್ಥಾನಕ್ಕೆ ವರ್ಗಾವಣೆ.
* ದೀಪಾ ಎಂ. (ಕೆಎನ್:2008). ವ್ಯವಸ್ಥಾಪಕ ನಿರ್ದೇಶಕರು, ಕೆಯುಐಡಿಎಫ್‌ಸಿ, ಬೆಂಗಳೂರು. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ (ಯುಡಿ & ಮುನ್ಸಿಪಾಲಿಟಿ), ಬೆಂಗಳೂರು ಸ್ಥಾನಕ್ಕೆ ವರ್ಗಾವಣೆ.
ಕೇಂದ್ರ ಚುನಾವಣಾ ಆಯೋಗ 2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲು ತಯಾರಿ ನಡೆಸಿದೆ. ಮಾರ್ಚ್ 10ರ ಬಳಿಕ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇದೆ. ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಆಗ ಸರ್ಕಾರಿ ನೌಕರ/ ಸಿಬ್ಬಂದಿಗಳ ವರ್ಗಾವಣೆಗೆ ಚುನಾವಣಾ ಆಯೋಗದ ಅನುಮತಿ ಬೇಕಾಗುತ್ತದೆ.












Click it and Unblock the Notifications