ಮೈಸೂರಿನಲ್ಲಿ ಚಿತ್ರಮಂದಿರದ ಗೋಡೆ ಕುಸಿದು ನಾಲ್ವರಿಗೆ ಗಾಯ

ಮೈಸೂರು: ನಿರಂತರವಾಗಿ ಮಳೆ ಸುರಿಯುತ್ತಿದ್ದ ಕಾರಣ ನಗರದ ಒಲಂಪಿಯಾ ಚಿತ್ರ ಮಂದಿರದ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಯರಗನಹಳ್ಳಿಯ ಸತೀಶ್(50), ರಾಜೀವ್ ನಗರದ ಶಾಕೀಬ್(18), ಹರ್ಮನ್(20), ತಬ್ರೇಜ್(40) ಅವರನ್ನು ನಗರದ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಡೆ ಕುಸಿದ ಸುದ್ದಿ ತಿಳಿದು ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಪಾಲಿಕೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತೆರವು ಕಾರ್ಯಾಚರಣೆ ನಡೆಸಿದರು. ಈ ವೇಳೆ ರಸ್ತೆಯ ಎರಡು ಕಡೆ ಬಂದ್ ಮಾಡಿ ವಾಹನ ಸಂಚಾರದೊಂದಿಗೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು.

Four Injured in Cinema Theatre Wall Collapse in Mysore

ಕಟ್ಟಡದ ಗೋಡೆ ಶಿಥಿಲಾವಸ್ಥೆಯಲ್ಲಿದ್ದರೂ ಅಗತ್ಯ ಕ್ರಮವಹಿಸದೇ ನಿರ್ಲಕ್ಷ್ಯ ವಹಿಸಿದ ಚಿತ್ರಮಂದಿರದ ಮಾಲೀಕರ ವಿರುದ್ಧ ಗಾಯಾಳುಗಳು ನೀಡಿದ ದೂರಿನ ಮೇರೆಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಲಯ ಆಯುಕ್ತೆ ಪ್ರತಿಭಾ, ದೇವರಾಜ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿಗೆ ಈ ಚಿತ್ರಮಂದಿರವನ್ನು ಸ್ಥಗಿತಗೊಳಿಸಲಾಗಿತ್ತು. ಬಳಿಕ ಚಿತ್ರಮಂದಿರದ ಕಟ್ಟಡದಲ್ಲಿ ವ್ಯಾಪಾರ ಮಳಿಗೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಚಿತ್ರಮಂದಿರದ ಸುತ್ತಲಿನ ಪ್ರದೇಶ ಯಾವಾಗಲೂ ಜನನಿಬಿಡವಾಗಿರುತ್ತದೆ. ಸುರಕ್ಷತೆ ಕ್ರಮಗಳನ್ನು ಅನುಸರಿಸದೇ ಕಾಮಗಾರಿ ನಡೆಸುತ್ತಿದ್ದರಿಂದ ಕಟ್ಟಡದ ಗೋಡೆ ಕುಸಿದಿದೆ ಎಂದು ಸ್ಥಳೀಯ ವ್ಯಾಪಾರಿಗಳು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+