ರಾಯಚೂರಲ್ಲಿ ನೀರಿನ ಟ್ಯಾಂಕ್ ಕುಸಿದು ಐವರು ಸಾವು
ರಾಯಚೂರು, ಜ. 3: ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನೀರಿನ ಟ್ಯಾಂಕ್ ಕುಸಿದು ಓರ್ವ ಮಹಿಳೆ ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈಚೆಗಷ್ಟೇ ನಿರ್ಮಿಸಿದ್ದ ಟ್ಯಾಂಕ್‌ನ ಅಡಿಯಲ್ಲಿ ಈ ನಾಲ್ವರೂ ನಿಂತಿದ್ದರು. ಈ ಸಂದರ್ಭದಲ್ಲಿ ನೀರು ತುಂಬಿದ್ದ ಟ್ಯಾಂಕ್ ಕುಸಿದು ಮೈ ಮೇಲೆ ಬಿದ್ದ ಪರಿಣಾಮ ನಾಲ್ವರೂ ಮೃತಪಟ್ಟಿದ್ದಾರೆ. ಟ್ಯಾಂಕ್ ಸುತ್ತ ಇದ್ದ ಕೆಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ.
ಕಾರಣವೇನು? : ಟ್ಯಾಂಕ್ ಈಚೆಗಷ್ಟೇ ನಿರ್ಮಾಣಗೊಂಡಿತ್ತು. ನೀರು ತುಂಬಿದ್ದ ಟ್ಯಾಂಕ್ ಕೆಳಗೆ ಹಲವರು ನಿಂತು ಸ್ನಾನ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಟ್ಯಾಂಕ್ ಕುಸಿದುಬಿದ್ದಿದೆ. ಟ್ಯಾಂಕ್ ಕುಸಿಯಲು ಕಳಪೆ ಕಾಮಗಾರಿ ಕಾರಣವೇ ಎಂಬುದನ್ನು ಇನ್ನಷ್ಟೇ ತಿಳಿಯಬೇಕಾಗಿದೆ.
ಪರಿಹಾರ ಘೋಷಣೆ : ಪ್ರಕರಣದಲ್ಲಿ ಮೃತಪಟ್ಟ ಐವರ ಕುಟುಂಬಕ್ಕೆ ತಲಾ ಒಂದು ಲಕ್ಷ ರು. ಪರಿಹಾರ ಘೋಷಿಸಲಾಗಿದೆ ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.












Click it and Unblock the Notifications