• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಧಾನ ಪರಿಷತ್ 4 ಕ್ಷೇತ್ರದ ಚುನಾವಣೆ; ಅಭ್ಯರ್ಥಿಗಳ ಪಟ್ಟಿ

|

ಬೆಂಗಳೂರು, ಸೆಪ್ಟೆಂಬರ್ 30 : ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಇದರ ಜೊತೆಗೆ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.

ಜೂನ್ 30ರಂದು ನಾಲ್ವರು ಸದಸ್ಯರ ಅವಧಿ ಅಂತ್ಯಗೊಂಡಿತ್ತು. ಕೋವಿಡ್ ಕಾರಣಗಿಂದಾಗಿ ಚುನಾವಣೆಯನ್ನು ಮುಂದೂಡಲಾಗಿತ್ತು. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ; ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. 4ರ ಪೈಕಿ ಹಿಂದೆ 2ರಲ್ಲಿ ಜೆಡಿಎಸ್ ಗೆದ್ದಿತ್ತು. ಈ ಬಾರಿಯ ಚುನಾವಣೆಯಲ್ಲಿ ಲೆಕ್ಕಾಚಾರ ಬದಲಾಗಲಿದೆ.

ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವುದರಿಂದ ಚುನಾವಣೆ ಕುತೂಹಲ ಮೂಡಿಸಿದೆ. ಈಗಾಗಲೇ ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಹಿಂದೆ ಜೆಡಿಎಸ್‌ನಿಂದ ಗೆದ್ದಿದ್ದ ಪುಟ್ಟಣ್ಣ ಬಿಜೆಪಿ, ರಮೇಶ್ ಬಾಬು ಕಾಂಗ್ರೆಸ್ ಸೇರಿದ್ದಾರೆ.

ಶಿರಾ ಉಪ ಚುನಾವಣೆ; ಬಿಜೆಪಿ ಟಿಕೆಟ್‌ಗೆ 8ಕ್ಕೂ ಅಧಿಕ ಆಕಾಂಕ್ಷಿಗಳು

ಆಗ್ನೇಯ ಪದವೀಧರ ಕ್ಷೇತ್ರ

ಆಗ್ನೇಯ ಪದವೀಧರ ಕ್ಷೇತ್ರ

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಆರ್. ಚೌಡರೆಡ್ಡಿ, ಕಾಂಗ್ರೆಸ್‌ನಿಂದ ರಮೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ಚಿದಾನಂದ ಗೌಡ ಅಭ್ಯರ್ಥಿಯಾಗಿದ್ದಾರೆ.

ಪಶ್ಚಿಮ ಪದವೀಧರ ಕ್ಷೇತ್ರ

ಪಶ್ಚಿಮ ಪದವೀಧರ ಕ್ಷೇತ್ರ

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್. ವಿ. ಸಂಕನೂರ, ಕಾಂಗ್ರೆಸ್‌ನಿಂದ ಕುಬೇರಪ್ಪ, ಜೆಡಿಎಸ್‌ನಿಂದ ಶಿವಶಂಕರ್ ಕಲ್ಲೂರ್ ಅಭ್ಯರ್ಥಿಯಾಗಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರ

ಈಶಾನ್ಯ ಶಿಕ್ಷಕರ ಕ್ಷೇತ್ರ

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶಿಲ್ ನಮೋಶಿ, ಜೆಡಿಎಸ್‌ನಿಂದ ತಿಮ್ಮಯ್ಯ ಪುರ್ಲೆ ಅಭ್ಯರ್ಥಿಗಳಾಗಿದ್ದಾರೆ. (ಚಿತ್ರ : ಶಶಿಲ್ ನಮೋಶಿ)

  ಚಳಿಗಾಲದಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಕೊರೊನಾ ಸೋಂಕು | Oneindia Kannada
  ಬೆಂಗಳೂರು ಶಿಕ್ಷಕರ ಕ್ಷೇತ್ರ

  ಬೆಂಗಳೂರು ಶಿಕ್ಷಕರ ಕ್ಷೇತ್ರ

  ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಪುಟ್ಟಣ್ಣ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ ಎ. ಪಿ. ರಂಗನಾಥ್, ಕಾಂಗ್ರೆಸ್‌ನಿಂದ ಪ್ರವೀಣ್ ಪೀಟರ್ ಅಭ್ಯರ್ಥಿಗಳು. (ಚಿತ್ರ : ಪುಟ್ಟಣ್ಣ)

  English summary
  Election commission announced schedule for 4 legislative council seat election. Election will be held on October 28, 2020. Here are the list of all party candidates.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X