ಸಿದ್ದರಾಮಯ್ಯ ಸಂಪುಟಕ್ಕೆ ನಾಲ್ವರು ಹೊಸ ಸಚಿವರ ಸೇರ್ಪಡೆ
ಬೆಂಗಳೂರು, ಅಕ್ಟೋಬರ್ 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಾಲ್ವರು ಸಚಿವರು ಸಿದ್ದರಾಮಯ್ಯ ಸಂಪುಟ ಸೇರಿದರು. ರಾಜಭನವದ ಹೊರಗೆ ನೂತನ ಸಚಿವರ ನೂರಾರು ಬೆಂಬಲಿಗರು ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಿದರು.
ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ, ಹಾಸನ ಜಿಲ್ಲೆ ಅರಕಲಗೂಡು ಶಾಸಕ ಎ.ಮಂಜು, ಧಾರವಾಡ ಶಾಸಕ ವಿನಯ್ ಕುಲಕರ್ಣಿ, ಹಾವೇರಿ ಜಿಲ್ಲೆಯ ಹಾನಗಲ್ ಶಾಸಕ ಮನೋಹರ ತಹಶೀಲ್ದಾರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. [ಪರಮೇಶ್ವರ ಪರಿಚಯ ಓದಿ]

ಡಾ.ಜಿ.ಪರಮೇಶ್ವರ ಹಾಗೂ ಮನೋಹರ್ ತಹಶೀಲ್ದಾರ್ ಅವರು ಸಂಪುಟ ದರ್ಜೆ ಸಚಿವರಾಗಿ, ಎ.ಮಂಜು ಮತ್ತು ವಿನಯ್ ಕುಲಕರ್ಣಿ ಅವರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.
ಸೋತರು ಸಂಪುಟ ಸೇರಿದ ಪರಮೇಶ್ವರ :2013ರ ವಿಧಾನಸಭೆ ಚುನಾವಣೆಗೆ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು 54,074 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಪರಮೇಶ್ವರ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ನ ಸುಧಾಕರಲಾಲ್ 72,229 ಮತಗಳನ್ನುಗಳಿಸಿ ಜಯಗಳಿಸಿದ್ದರು.
2014ರ ಜುಲೈ 1ರಂದು ಪರಮೇಶ್ವರ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು. 2010ರ ಅ. 29ರಂದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಪರಮೇಶ್ವರ ಅವರು ಅಕ್ಟೋಬರ್ 29ರ ಗುರುವಾರ ಐದು ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಅಂದೇ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ವಿಶೇಷ.
ಸಾರ್ಥಕ ಸಮಾವೇಶ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಪರಮೇಶ್ವರ ಅವರು ಐದು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 30ರ ಶುಕ್ರವಾರ 'ಸಾರ್ಥಕ ಸಮಾವೇಶ' ಹಮ್ಮಿಕೊಳ್ಳಲಾಗಿದೆ. ಅರಮನೆ ಮೈದಾನದ ನಲ್ಪಾಡ್ ಪೆವಿಲಿಯನ್‌ನಲ್ಲಿ ಬೆಳಗ್ಗೆ 10.30ಕ್ಕೆ ಸಮಾವೇಶ ಉದ್ಘಾಟನೆಗೊಳ್ಳಲಿದೆ.
ಸಮಯ 5 ಗಂಟೆ : ನೂತನವಾಗಿ ಸಂಪುಟ ಸೇರಿದ ಸಚಿವರಿಗೆ ಶೀಘ್ರದಲ್ಲಿಯೇ ಖಾತೆ ಹಂಚಿಕೆಯಾಗಲಿದೆ. [ಜಾರ್ಜ್ ಕೈ ತಪ್ಪಲಿದೆ ಗೃಹ ಖಾತೆ]
ಸಮಯ 4.52 : ಈಗ ಸಿದ್ದರಾಮಯ್ಯ ಸಂಪುಟದ ಒಟ್ಟು ಸಚಿವರ ಸಂಖ್ಯೆ 34
ಸಮಯ 4.49 : ಸಂಪುಟ ದರ್ಜೆ ಸಚಿವರಾಗಿ ಪರಮೇಶ್ವರ, ಮನೋಹರ್ ತಹಶೀಲ್ದಾರ್ ಮತ್ತು ಸ್ವತಂತ್ರ ಖಾತೆ ಸಚಿವರಾಗಿ ವಿನಯ್ ಕುಲಕರ್ಣಿ, ಎ.ಮಂಜು ಅವರಿಂದ ಪ್ರಮಾಣ ವಚನ ಸ್ವೀಕಾರ
ಸಮಯ 4.48 : ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಮಯ 4.47 : ನೂತನ ಸಚಿವರನ್ನು ಅಭಿನಂದಿಸಿದ ರಾಜ್ಯಪಾಲ ವಜುಭಾಯಿ ವಾಲಾ
ಸಮಯ 4.45 : ಸ್ವತಂತ್ರ ಖಾತೆ ಸಚಿವರಾಗಿ ಎ.ಮಂಜು ಅವರು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು
ಸಮಯ 4.42 : ಸ್ವತಂತ್ರ ಖಾತೆ ಸಚಿವರಾಗಿ ವಿನಯ್ ಕುಲಕರ್ಣಿ ಅವರು ದೇವರ ಹೆಸರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು
ಸಮಯ 4.38 : ಮನೋಹರ್ ತಹಶೀಲ್ದಾರ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಸಮಯ 4.35 : ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ
ಸಮಯ 4.30 : ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯಪಾಲ ವಜುಭಾಯಿ ವಾಲಾ
ಸಮಯ 4.25 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಹಲವು ಸಚಿವರು ರಾಜಭವನಕ್ಕೆ ಆಗಮಿಸಿದ್ದಾರೆ
* ಧಾರವಾಡ ದಕ್ಷಿಣದ ಶಾಸಕ ವಿನಯ್ ಕುಲಕರ್ಣಿ ಪರಿಚಯ
* ಮನೋಹರ್ ತಹಶೀಲ್ದಾರ್ ಪರಿಚಯ
* ಶಾಸಕ ಅರಕಲಗೂಡು ಮಂಜು ಪರಿಚಯ
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?











Click it and Unblock the Notifications