ಸಂಪುಟ ಸೇರುವವರ ಪಟ್ಟಿ ಅಂತಿಮ, ಇಂದು ಪ್ರಮಾಣ ವಚನ
ಬೆಂಗಳೂರು, ಅಕ್ಟೋಬರ್ 29 : ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಬಗೆಹರಿದಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸೇರಿದಂತೆ ಮೂವರು ಸಿದ್ದರಾಮಯ್ಯ ಸಂಪುಟ ಸೇರಲಿದ್ದು, ಗುರುವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಬುಧವಾರ ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ನಾಲ್ವರು ಸಚಿವರು ಸಂಪುಟ ಸೇರಲಿದ್ದಾರೆ. ಗುರುವಾರ ಸಂಜೆ 4.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ' ಎಂದು ಹೇಳಿದರು. [ಸಂಪುಟ ಸೇರುವವರ ಪಟ್ಟಿ ಬದಲಾವಣೆ]

ಸಂಪುಟ ಸೇರುವವರು : ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ, ಹಾಸನ ಜಿಲ್ಲೆ ಅರಕಲಗೂಡು ಶಾಸಕ ಎ.ಮಂಜು, ಧಾರವಾಡ ಶಾಸಕ ವಿನಯ್ ಕುಲಕರ್ಣಿ, ಹಾವೇರಿ ಜಿಲ್ಲೆಯ ಹಾನಗಲ್ ಶಾಸಕ ಮನೋಹರ ತಹಶೀಲ್ದಾರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. [ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ?]
ಪಟ್ಟು ಸಡಿಲಿಸಿದ ಪರಮೇಶ್ವರ : ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರು ಸಿದ್ದರಾಮಯ್ಯ ಸಂಪುಟ ಸೇರುವುದಾದದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಪಟ್ಟು ಹಿಡಿದಿದ್ದರು. ಪಕ್ಷದ ಅಧ್ಯಕ್ಷೆ ಸೋನಿಯಾ ಅವರು ಮನವೊಲಿಸಿದ ನಂತರ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ. ಆದರೆ, ಅವರಿಗೆ ಯಾವ ಖಾತೆ ನೀಡಲಾಗುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ.
ಸಚಿವರಾಗಿ ಮುಂದುವರೆಯಲಿದ್ದಾರೆ : ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಂಪುಟ ಸೇರಲಿದ್ದಾರೆ. ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪೀಕರ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಆಗಿ, ಜಯಚಂದ್ರ ಅವರು ಕಾನೂನು ಸಚಿವರಾಗಿಯೇ ಮುಂದುವರಿಯುತ್ತಾರೆ' ಎಂದು ಸ್ಪಷ್ಟಪಡಿಸಿದರು.
-
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications