ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ಸೇರುವವರ ಪಟ್ಟಿ ಅಂತಿಮ, ಇಂದು ಪ್ರಮಾಣ ವಚನ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 29 : ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಬಗೆಹರಿದಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸೇರಿದಂತೆ ಮೂವರು ಸಿದ್ದರಾಮಯ್ಯ ಸಂಪುಟ ಸೇರಲಿದ್ದು, ಗುರುವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಬುಧವಾರ ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ನಾಲ್ವರು ಸಚಿವರು ಸಂಪುಟ ಸೇರಲಿದ್ದಾರೆ. ಗುರುವಾರ ಸಂಜೆ 4.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ' ಎಂದು ಹೇಳಿದರು. [ಸಂಪುಟ ಸೇರುವವರ ಪಟ್ಟಿ ಬದಲಾವಣೆ]

karnataka

ಸಂಪುಟ ಸೇರುವವರು : ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ, ಹಾಸನ ಜಿಲ್ಲೆ ಅರಕಲಗೂಡು ಶಾಸಕ ಎ.ಮಂಜು, ಧಾರವಾಡ ಶಾಸಕ ವಿನಯ್‌ ಕುಲಕರ್ಣಿ, ಹಾವೇರಿ ಜಿಲ್ಲೆಯ ಹಾನಗಲ್‌ ಶಾಸಕ ಮನೋಹರ ತಹಶೀಲ್ದಾರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. [ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ?]

ಪಟ್ಟು ಸಡಿಲಿಸಿದ ಪರಮೇಶ್ವರ : ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರು ಸಿದ್ದರಾಮಯ್ಯ ಸಂಪುಟ ಸೇರುವುದಾದದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಪಟ್ಟು ಹಿಡಿದಿದ್ದರು. ಪಕ್ಷದ ಅಧ್ಯಕ್ಷೆ ಸೋನಿಯಾ ಅವರು ಮನವೊಲಿಸಿದ ನಂತರ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ. ಆದರೆ, ಅವರಿಗೆ ಯಾವ ಖಾತೆ ನೀಡಲಾಗುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ.

ಸಚಿವರಾಗಿ ಮುಂದುವರೆಯಲಿದ್ದಾರೆ : ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಂಪುಟ ಸೇರಲಿದ್ದಾರೆ. ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪೀಕರ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್‌ ಆಗಿ, ಜಯಚಂದ್ರ ಅವರು ಕಾನೂನು ಸಚಿವರಾಗಿಯೇ ಮುಂದುವರಿಯುತ್ತಾರೆ' ಎಂದು ಸ್ಪಷ್ಟಪಡಿಸಿದರು.

English summary
Karnataka Chief Minister Siddaramaiah will finally expand his cabinet. The oath taking ceremony will be held on Thursday at around 4.30 pm at Raj Bhavan Bengaluru. Parameshwar, Manohar Tahsildar, Vinay Kulkarni, A Manju will join cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X