ಕರ್ನಾಟಕದ ನಾಲ್ವರಿಗೆ ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು, ಸೆ. 18: ರಾಜ್ಯದ ನಾಲ್ವರಿಗೆ 2019-20ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನಾಲ್ವರು ಎನ್‌ಎಸ್‌ಎಸ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, 6 ವರ್ಷಗಳ ಬಳಿಕ ರಾಜ್ಯಕ್ಕೆ ಈ ಪ್ರಶಸ್ತಿ ಒಲಿದುಬಂದಿದೆ. ರಾಷ್ಟ್ರೀಯ ಗೌವರಕ್ಕ ಭಾಜನರಾಗಿರುವವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಅಭಿನಂದಿಸಿದ್ದಾರೆ.
ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜಕ ಡಾ. ಬಿ. ವಸಂತ ಶೆಟ್ಟಿ, ಕಾಲೇಜು ಮಟ್ಟದ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗೆ ಧಾರವಾಡದ ಜೆಎಸ್‍ಎಸ್ ಬನಶಂಕರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕಾರ್ಯಕ್ರಮ ಅಧಿಕಾರಿ ಸುರೇಶಪ್ಪ ಕೆ. ಸಜ್ಜನ, ರಾಷ್ಟ್ರಮಟ್ಟದಲ್ಲಿ ಕಾರ್ಯ ನಿರ್ವಹಿಸಿದ ಸ್ವಯಂಸೇವಕರ ವಿಭಾಗದಲ್ಲಿ ಬೆಂಗಳೂರಿನ ಕೆ.ಎಸ್.ಇನ್ಸ್ಟಟ್ಯೂಟ್ ಆಫ್ ಟೆಕ್ನಾಲಜಿಯ ಸ್ವಯಂ ಸೇವಕ ಸಿರೀಶ್ ಗೋವರ್ಧನ್ ಮತ್ತು ಮಂಗಳೂರು ಸೂರತ್ಕಲ್‍ನ ಗೋವಿಂದ ದಾಸ್ ಕಾಲೇಜಿನ ಸ್ವಯಂ ಸೇವಕಿ ಬಿಂದಿಯಾ ಶೆಟ್ಟಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ 6 ವರ್ಷಗಳಲ್ಲಿ ಎನ್‍ಎಸ್‍ಎಸ್ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದಿಂದ ಯಾರೂ ಆಯ್ಕೆಯಾಗಿರಲಿಲ್ಲ. ಈ ಬಾರಿ 4 ಜನ ಸಾಧಕರು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಸೆಪ್ಟಂಬರ್ 24 ರಂದು ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ ಪ್ರಶಸ್ತಿ ಪುರಸ್ಕೃತರಿಗೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

ಸುರತ್ಕಲ್‌ನ ಬಿಂದಿಯಾ: ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಅತ್ಯುತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ್ ದಾಸ್ ಕಾಲೇಜಿನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಬಿಂದಿಯಾ ಎಲ್. ಶೆಟ್ಟಿ ಆಯ್ಕೆಯಾಗಿದ್ದಾರೆ.

ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಬಿಂದಿಯಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಬಿಂದಿಯಾ ಶೆಟ್ಟಿ ಅವರು ಕಟ್ಲದ ಲೀಲಾಧರ್ ಶೆಟ್ಟಿ ಹಾಗೂ ಸುಜಾತಾ ಶೆಟ್ಟಿ ಅವರ ಪುತ್ರಿಯಾಗಿದ್ದಾರೆ. ಬಿಂದಿಯಾ ಅವರು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲಿಯೇ ಐದನೇ ಸ್ಥಾನ ಪಡೆದಿದ್ದರು. ಸದ್ಯ ಸಿಎ ವ್ಯಾಸಂಗವನ್ನು ಅವರು ಮಾಡುತ್ತಿದ್ದು, ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. 2019 ರಲ್ಲಿ ನವದೆಹಲಿಯಲ್ಲಿ ನಡೆದಿದ್ದ ಗಣರಾಜ್ಯೋತ್ಸವ ಪರೇಡ್‌ನಲ್ಲಿಯೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.
Recommended Video
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications