ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ನಾಲ್ವರಿಗೆ ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಪ್ರಶಸ್ತಿ

|
Google Oneindia Kannada News

ಬೆಂಗಳೂರು, ಸೆ. 18: ರಾಜ್ಯದ ನಾಲ್ವರಿಗೆ 2019-20ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನಾಲ್ವರು ಎನ್‌ಎಸ್‌ಎಸ್‌ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, 6 ವರ್ಷಗಳ ಬಳಿಕ ರಾಜ್ಯಕ್ಕೆ ಈ ಪ್ರಶಸ್ತಿ ಒಲಿದುಬಂದಿದೆ. ರಾಷ್ಟ್ರೀಯ ಗೌವರಕ್ಕ ಭಾಜನರಾಗಿರುವವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಅಭಿನಂದಿಸಿದ್ದಾರೆ.

ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜಕ ಡಾ. ಬಿ. ವಸಂತ ಶೆಟ್ಟಿ, ಕಾಲೇಜು ಮಟ್ಟದ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗೆ ಧಾರವಾಡದ ಜೆಎಸ್‍ಎಸ್‍ ಬನಶಂಕರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕಾರ್ಯಕ್ರಮ ಅಧಿಕಾರಿ ಸುರೇಶಪ್ಪ ಕೆ. ಸಜ್ಜನ, ರಾಷ್ಟ್ರಮಟ್ಟದಲ್ಲಿ ಕಾರ್ಯ ನಿರ್ವಹಿಸಿದ ಸ್ವಯಂಸೇವಕರ ವಿಭಾಗದಲ್ಲಿ ಬೆಂಗಳೂರಿನ ಕೆ.ಎಸ್‍.ಇನ್ಸ್ಟಟ್ಯೂಟ್‍ ಆಫ್ ಟೆಕ್ನಾಲಜಿಯ ಸ್ವಯಂ ಸೇವಕ ಸಿರೀಶ್ ಗೋವರ್ಧನ್‍ ಮತ್ತು ಮಂಗಳೂರು ಸೂರತ್ಕಲ್‍ನ ಗೋವಿಂದ ದಾಸ್ ಕಾಲೇಜಿನ ಸ್ವಯಂ ಸೇವಕಿ ಬಿಂದಿಯಾ ಶೆಟ್ಟಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಳೆದ 6 ವರ್ಷಗಳಲ್ಲಿ ಎನ್‍ಎಸ್‍ಎಸ್‍ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದಿಂದ ಯಾರೂ ಆಯ್ಕೆಯಾಗಿರಲಿಲ್ಲ. ಈ ಬಾರಿ 4 ಜನ ಸಾಧಕರು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಸೆಪ್ಟಂಬರ್ 24 ರಂದು ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ ಪ್ರಶಸ್ತಿ ಪುರಸ್ಕೃತರಿಗೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

Four of state have selected for prestigious National Service Scheme National Award

ಸುರತ್ಕಲ್‌ನ ಬಿಂದಿಯಾ: ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಅತ್ಯುತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ್ ದಾಸ್ ಕಾಲೇಜಿನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಬಿಂದಿಯಾ ಎಲ್. ಶೆಟ್ಟಿ ಆಯ್ಕೆಯಾಗಿದ್ದಾರೆ.

Four of state have selected for prestigious National Service Scheme National Award

ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಬಿಂದಿಯಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಬಿಂದಿಯಾ ಶೆಟ್ಟಿ ಅವರು ಕಟ್ಲದ ಲೀಲಾಧರ್ ಶೆಟ್ಟಿ ಹಾಗೂ ಸುಜಾತಾ ಶೆಟ್ಟಿ ಅವರ ಪುತ್ರಿಯಾಗಿದ್ದಾರೆ. ಬಿಂದಿಯಾ ಅವರು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲಿಯೇ ಐದನೇ ಸ್ಥಾನ ಪಡೆದಿದ್ದರು. ಸದ್ಯ ಸಿಎ ವ್ಯಾಸಂಗವನ್ನು ಅವರು ಮಾಡುತ್ತಿದ್ದು, ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. 2019 ರಲ್ಲಿ ನವದೆಹಲಿಯಲ್ಲಿ ನಡೆದಿದ್ದ ಗಣರಾಜ್ಯೋತ್ಸವ ಪರೇಡ್‌ನಲ್ಲಿಯೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.

Recommended Video

ಚೆನ್ನೈ ವಿರುದ್ಧ ಮುಂಬೈ ಸೋಲಲು ರೋಹಿತ್ ಕಾರಣ ಆಗಿದ್ದು ಹೇಗೆ? | Oneindia Kannada

English summary
Four of the state have been selected for the prestigious National Service Scheme National Award. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X