ಚಿಕ್ಕಬಳ್ಳಾಪುರ: ಅಪಘಾತದಲ್ಲಿ ನಾಲ್ವರು ಯುವಕರು ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇದಕ್ಕೆ ಮುಖ್ಯ ಕಾರಣಗಳು ಅತಿ ವೇಗದ ಚಾಲನೆ, ಮೊಬೈಲ್ ಬಳಕೆ, ಕುಡಿದು ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದಿರುವುದು, ಸಂಚಾರ ನಿಯಮ ಪಾಲಿಸದಿರುವುದು. ಮೊನ್ನೆಯಷ್ಟೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಅಪಘಾತ ಸಂಭವಿಸಿದೆ.
ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಪಟ್ಟಿರುವ ನಾಲ್ವರು ಯುವಕರು. ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ಇದ್ದಂತಹ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತರ ಕುಟುಂಬದ ಸದಸ್ಯರಿಗೆ 5 ಲಕ್ಷ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಪರಿಹಾರ ವಿತರಣೆಗೆ ಕ್ರಮ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇನ್ನೂ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಯುವಕರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು.
ಈ ಮೃತ ನಾಲ್ವರು ಯುವಕರು ಒಂದೇ ಬೈಕಿನಲ್ಲಿ ಸ್ವಗ್ರಾಮದತ್ತ ಹೊರಟಿದ್ದರು. ಈ ವೇಳೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಅಪಘಾತದಲ್ಲಿ ಅಣ್ಣ ನರಸಿಂಹ, ತಮ್ಮ ನಂದೀಶ್ ಅಗಲುವಿಕೆ ಕುಟುಂಬ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಇತ್ತ ಕಳೆದ ಐದು ವರ್ಷಗಳ ಹಿಂದೆ ಮೃತರ ತಂದೆಯೂ ಕ್ರಿಸ್ಮಸ್ ಹಬ್ಬದ ದಿನವೇ ಮೃತಪಟ್ಟಿದ್ದರು. ಇದೀಗ ಕುಟುಂಬಕ್ಕೆ ಆಧಾರವಾಗಿದ್ದ ಇಬ್ಬರು ಗಂಡು ಮಕ್ಕಳೂ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದು, ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ನರಸಿಂಹ ಕೇವಲ ಆರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications