ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ, ಗೆಜೆಟ್ ಅಧಿಸೂಚನೆ ಪ್ರಕಟ
ಬೆಂಗಳೂರು, ಜೂನ್ 12 : ಕರ್ನಾಟಕದ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಸಿಗಲಿದೆ. ಸರ್ಕಾರ ಈ ಕುರಿತು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಇದರಿಂದಾಗಿ 2 ಮತ್ತು 4ನೇ ಶನಿವಾರ ಸರ್ಕಾರಿ ನೌಕರರಿಗೆ ರಜೆ ಸಿಕ್ಕಿದಂತಾಗಿದೆ.
ಬುಧವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಶಿವಕುಮಾರ್ ಅವರು ಈ ಕುರಿತು ಆದೇಶ ಹೊರಡಿಸಿದರು. 4ನೇ ಶನಿವಾರ ಸರ್ಕಾರಿ ನೌಕರರಿಗೆ ರಜೆ ಇದೆ ಎಂದು ಗೆಜೆಟ್ ಅಧಿಸೂಚನೆ ಹೇಳಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲಾ ಆದೇಶಗಳನ್ನು ರದ್ದುಪಡಿಸುತ್ತಾ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಪ್ರತಿ ತಿಂಗಳ 4ನೇ ಶನಿವಾರವನ್ನು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಿದೆ ಎಂದು ಗೆಜೆಟ್ ಅಧಿಸೂಚನೆ ತಿಳಿಸಿದೆ.

10 ದಿವಸಗಳ ರಜೆ : 4ನೇ ಶನಿವಾರ ರಜೆ ನೀಡಿರುವ ಕರ್ನಾಟಕ ಸರ್ಕಾರ 15 ದಿನಗಳಿದ್ದ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಕಡಿತಗೊಳಿಸಿದೆ. ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.












Click it and Unblock the Notifications